• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮೈಸೂರಲ್ಲಿ ಸಂಭವಾಮಿ ಯುಗೇ ಯುಗೇ..

ಪ್ರತಿಧ್ವನಿ by ಪ್ರತಿಧ್ವನಿ
June 9, 2024
in ಸಿನಿಮಾ
0
ಮೈಸೂರಲ್ಲಿ ಸಂಭವಾಮಿ ಯುಗೇ ಯುಗೇ..
Share on WhatsAppShare on FacebookShare on Telegram

ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು, ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಸಂಭವಾಮಿ ಯುಗೇ ಯುಗೇ. ರಾಜಲಕ್ಷ್ಮಿ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರವು ಇದೇ ತಿಂಗಳು 21ರಂದು ಬಿಡುಗಡೆಯಾಗಲಿದೆ. ಜಯ್ ಶೆಟ್ಟಿ – ನಿಶಾ ರಜಪೂತ್ ಹಾಗೂ ಮಧುರಾಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಅರಮನೆಗಳ ನಗರ ಮೈಸೂರಿಗೆ ಭೇಟಿಕೊಟ್ಟು ಮಾಧ್ಯಮಗಳ ಜೊತೆ ಮಾತನಾಡಿತು.

ADVERTISEMENT

ತಮ್ಮ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಕುರಿತಂತೆ ಮಾತನಾಡಿದ ಚೇತನ್ ಚಂದ್ರಶೇಖರ್ ಶೆಟ್ಟಿ, ನಾನು ಕಳೆದ ಹತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದು, ಸೋಷಿಯಲ್ ಕಂಟೆಂಟ್ ಇಟ್ಟುಕೊಂಡು ಈ ಚಿತ್ರ ನಿರ್ದೇಶನ ಮಾಡಿದ್ದೇನೆ. ಫ್ಯಾಮಿಲಿ ಆಡಿಯನ್ಸ್ ಕೂತು ನೋಡುವಂಥ ವಿಭಿನ್ನ ಕಮರ್ಷಿಯಲ್ ಕಾನ್ಸೆಪ್ಟ್ ಇರುವ ಈ ಚಿತ್ರಕ್ಕೆ ಚಿತ್ರದಲ್ಲಿ ಕೃಷ್ಣನ ಪಾತ್ರ ಹಾಗೂ ಅರ್ಜುನನನ್ನು ಹೋಲುವ ಪಾತ್ರಗಳೂ ಇವೆ. ಮಂಡ್ಯ, ಚನ್ನಪಟ್ಟಣ, ರಾಮನಗರ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಈಗಾಗಲೇ ಚಿತ್ರದ ಟೀಸರ್, ಸಾಂಗ್ಸ್ ವೈರಲ್ ಆಗಿದ್ದು, ಸದ್ಯದಲ್ಲೇ ಟ್ರೈಲರ್ ಬಿಡುಗಡೆ ಮಾಡುತ್ತಿದ್ದೇವೆ.

ಹಳ್ಳಿಯ ಹುಡುಗರು ವಿದ್ಯಾವಂತರಾದ ಮೇಲೆ, ಕೆಲಸದ ನಿಮಿತ್ತ ಪಟ್ಟಣಕ್ಕೆ ಅಂತ ಹೋದವರು ಅಲ್ಲೇ ನೆಲೆಸುತ್ತಾರೆ. ಇದರಿಂದ ಮುಂದಿನ ತಲೆಮಾರಿನ ಕಥೆ ಏನು ? ನಮ್ಮ ಹಳ್ಳಿಗಳು ಉಳಿಯುವುದಾದರೂ ಹೇಗೆ ?, ಹಾಗಾಗಿ ಯುವಕರು ಹಳ್ಳಿಯಲ್ಲೇ ನೆಲೆಸಬೇಕು, ಹಳ್ಳಿಗಳನ್ನು ಬೆಳೆಸಬೇಕು ಎಂಬ ಕಥಾಹಂದರದ ಮೇಲೆ ಈ ಚಿತ್ರ ಮಾಡಿದ್ದೇವೆ. ಜೂನ್ 21ಕ್ಕೆ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ. ಕಮರ್ಷಿಯಲ್ ಚಿತ್ರವಾದರೂ, ಇವತ್ತಿನ ತಲೆಮಾರಿನವರಿಗೆ ಕನೆಕ್ಟ್ ಆಗುವಂಥ ಹಲವಾರು ಅಂಶಗಳು ನಮ್ಮ ಚಿತ್ರದಲ್ಲಿವೆ ಎಂದು ಹೇಳಿದರು.

ನಾಯಕ ಜಯ್‌ಶೆಟ್ಟಿ ಮಾತನಾಡಿ ಈ ಹಿಂದೆ 1975 ಎಂಬ ಚಿತ್ರದಲ್ಲಿ ಅಭಿನಯಿಸಿದ್ದೆ. ಕೃಷಿ ಮತ್ತು ರೈತರ ಮೇಲೆ ಮಾಡಿದ ಚಿತ್ರವಿದು, ತನಗೆ ಆಶ್ರಯ ಕೊಟ್ಟ ಊರಿಗೆ ಏನಾದರೂ ಮಾಡಬೇಕು ಎಂದು ನಾಯಕ ಮುಂದಾಗುತ್ತಾನೆ. ಮುಂದೇನಾಗುತ್ತದೆ ಎನ್ನುವುದೇ ಈ ಚಿತ್ರದ ಕಾನ್ಸೆಪ್ಟ್ ಎಂದರು.

ನಾಯಕಿ ನಿಶಾ ರಜಪೂತ್ ಮಾತನಾಡುತ್ತ ನಾನು ಬಿಜಾಪುರದವಳಾದರೂ, ಬೆಳೆದಿದ್ದು ಮುಂಬೈನಲ್ಲಿ. ಕನ್ನಡದಲ್ಲಿ ನಟಿಸಬೇಕು ಎಂಬ ಆಸೆ ಇತ್ತು. ಈ ಚಿತ್ರದಲ್ಲಿ ಸ್ವಾತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು, ನಾಯಕನ ತಂಗಿಯ ಪಾತ್ರ ಮಾಡಿರುವ ಮಧುರಾಗೌಡ ಮಾತನಾಡಿ ಈ ಚಿತ್ರದಲ್ಲಿ ಸುಧಾರಾಣಿ ಅವರ ಮಗಳಾಗಿ ನಟಿಸಿದ್ದು ನನ್ನ ಅದೃಷ್ಟ ಎಂದು ತನ್ನ‌ ಪಾತ್ರದ ಕುರಿತು ಹೇಳಿಕೊಂಡರು. ಪೂರನ್ ಶೆಟ್ಟಿಗಾರ್ ಅವರ ಸಂಗೀತ ಸಂಯೋಜನೆ, ರಾಜು ಹೆಮ್ಮಿಗೆಪುರ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಉಳಿದಂತೆ ಕಲಾವಿದರಾದ ಬಲ ರಾಜವಾಡಿ, ಪುನೀತ್, ಅಶ್ವಿನ್‌ಹಾಸನ್ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದು ತಮ್ಮ ಪಾತ್ರಗಳ‌ ಕುರಿತು ಮಾತನಾಡಿದರು.

Previous Post

ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ

Next Post

ಕಿರಿಯ ವಯಸ್ಸಿನಲ್ಲಿಯೇ ಕೇಂದ್ರ ಸಚಿವರಾಗಿ ದಾಖಲೆ ಬರೆದ ಟಿಡಿಪಿ ನಾಯಕ

Related Posts

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 
ಸಿನಿಮಾ

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

by ಪ್ರತಿಧ್ವನಿ
April 28, 2026
0

ನಿರ್ದೇಶಕ ಪ್ರೇಮ್ ಅವರ ಬಹುನಿರೀಕ್ಷಿತ ‘ಕೆಡಿ’ ಸಿನಿಮಾದ ಪ್ರಚಾರ ಭಾಗವಾಗಿ ನಡೆದ ಪ್ರೆಸ್ ಮೀಟ್‌ನಲ್ಲಿ ಕಿಚ್ಚ ಸುದೀಪ್ ಭಾಗವಹಿಸಿ ಹಲವು ವಿಷಯಗಳ ಬಗ್ಗೆ ಮಾತನಾಡಿದರು. ವಿಶೇಷವಾಗಿ ‘ಸೆರಗ...

Read moreDetails
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಕಿರಿಯ ವಯಸ್ಸಿನಲ್ಲಿಯೇ ಕೇಂದ್ರ ಸಚಿವರಾಗಿ ದಾಖಲೆ ಬರೆದ ಟಿಡಿಪಿ ನಾಯಕ

ಕಿರಿಯ ವಯಸ್ಸಿನಲ್ಲಿಯೇ ಕೇಂದ್ರ ಸಚಿವರಾಗಿ ದಾಖಲೆ ಬರೆದ ಟಿಡಿಪಿ ನಾಯಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada