• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿ ಸ್ಥಾನಗಳನ್ನು ಗಳಿಸಲಿದೆ: ಪ್ರತಾಪ್ ಸಿಂಹ ವಿಶ್ವಾಸ

ಪ್ರತಿಧ್ವನಿ by ಪ್ರತಿಧ್ವನಿ
March 10, 2023
in Top Story
0
ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿ ಸ್ಥಾನಗಳನ್ನು ಗಳಿಸಲಿದೆ: ಪ್ರತಾಪ್ ಸಿಂಹ ವಿಶ್ವಾಸ
Share on WhatsAppShare on FacebookShare on Telegram

ಮೈಸೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿ ಸ್ಥಾನಗಳನ್ನು ಗಳಿಸಲಿದೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಯಾರು ಏನೇ ಹೇಳಿದರೂ ಜನರು ಬಿಜೆಪಿಗೆ ಮತ ನೀಡಲಿದ್ದಾರೆ. ಹಾಗಾಗಿ ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ. ಮುಂದೊಂದು ದಿ‌ನ ಇಡೀ ಹಳೇ ಮೈಸೂರು ಭಾಗ ಬಿಜೆಪಿ ಮಯವಾಗಲಿದೆ ಎಂದರು.

ಮಂಡ್ಯದ 3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಮಂಡ್ಯ ಬಿಜೆಪಿ ಪಾಲಿಗೆ ಗಗನ ಕುಸುಮ ಆಗಿತ್ತು.ಈಗಲೂ ನಮ್ಮ ಶಾಸಕರು ಇಲ್ಲ. ಆದರೂ ಮೋದಿ ಸಬ್ ಕಾ ಸಾಥ್ ಸಬ್ ಕ ವಿಕಾಸ್ ದೃಷ್ಟಿಯಿಂದ ಮಂಡ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ಧ್ಯೇಯ ವಾಕ್ಯದೊಂದಿಗೆ ಎಲ್ಲಾ ವರ್ಗದ ಜನರಿಗೂ ನ್ಯಾಯ ಒದಗಿಸುತ್ತಿದ್ದಾರೆ. ಕಳೆದ ವಿಧಾನಾಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಮತದಾರರು ಬಿಜೆಪಿಗೆ ಹೆಚ್ಚಿನ ಪ್ರಮಾಣದಲ್ಲಿ ಮತ ನೀಡದಿದ್ಧರೂ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಸರಕಾರ ಅಗತ್ಯ ನೆರವು ನೀಡಿದೆ ಎಂದರು.

ಮೋದಿ ಕಾರ್ಯಕ್ರಮಕ್ಕೆ ಒಂದೂವರೆ ಲಕ್ಷ ಜನ

ಮಾರ್ಚ್ 12 ರಂದು ನರೇಂದ್ರಮೋದಿ ಅವರು ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಉದ್ಘಾಟನೆ ನಡೆಸಲಿದ್ದು, ಕಾರ್ಯಕ್ರಮಕ್ಕೆ ಸುಮಾರು ಒಂದೂವರೆ ಲಕ್ಷ ಜನ ಸೇರಲಿದ್ದಾರೆ ಎಂದು ಹೇಳಿದ್ದಾರೆ.

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಉದ್ಘಾಟನೆಗೆ ನರೇಂದ್ರ ಮೋದಿಯವರು ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ಬಳಿಕ ಅಲ್ಲಿಂದ ಮಂಡ್ಯದತ್ತ ಹೇಳಿಕಾಪ್ಟರ್ ನಲ್ಲಿ ತೆರಳುತ್ತಾರೆ. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಆಗಲಿದೆ. ಈ ವೇಳೆ ರೋಡ್ ಶೋದಲ್ಲಿ ಭಾಗಿಯಾಗಲಿದ್ದಾರೆ. ಮೋದಿ 50 ಮೀಟರ್ ನಷ್ಟು ರಸ್ತೆಯಲ್ಲಿ ಓಡಾಡಿ ರಸ್ತೆ ಉದ್ಘಾಟನೆ ಮಾಡಲಿದ್ದಾರೆ‌ ಎಂದು ತಿಳಿಸಿದರು.

ಕೇಂದ್ರ, ರಾಜ್ಯ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳು ಮಂಡ್ಯದಲ್ಲೇ 2.60 ಲಕ್ಷ ಮಂದಿ ಇದ್ದಾರೆ. ಜೊತೆಗೆ ಅಮೃತ್, ಜಲ ಜೀವನ್, ಆಯುಷ್ಮಾನ್ ಭಾರತ್ ಸೇರಿದಂತೆ ಹಲವು ಯೋಜನೆಗಳ ಫಲಾನುಭವಿಗಳು ಇದ್ದಾರೆ. 12 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗುತ್ತದೆ ಎಂದರು.

ಶ್ರೀರಂಗಪಟ್ಟಣದಿಂದ ಮಂಡ್ಯವರೆಗೆ 135 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಸುವ ಯೋಜನೆ, 1500 ಕೋಟಿ ರೂಪಾಯಿ ವೆಚ್ಚದ ಜಲ ಜೀವನ್ ಮಿಷನ್, ಮೈಸೂರು- ಕುಶಾಲನಗರ ಚತುಷ್ಪಥ ಯೋಜನೆಗೂ ಭೂಮಿಪೂಜೆ ಮಾಡಲಿದ್ದಾರೆ ಎಂದರು.

ಸಚಿವ ಮಹದೇವಪ್ಪ ಜೊತೆ ಚರ್ಚಿಸಲು ಸಿದ್ದ

ಮೈಸೂರು-ಬೆಂಗಳೂರು ಹೈವೆ ಕಾಮಗಾರಿಯ ಸಂಪೂರ್ಣ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಗೇ ಸಲ್ಲಬೇಕು.ಮೋದಿಯನ್ನು ಪ್ರಧಾನಿ ಮಾಡಲು ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೇ ಇದರ ಶ್ರೇಯಸ್ಸು ಸಲ್ಲಬೇಕು. ಈ ಕುರಿತು ಮಾಜಿ ಸಚಿವ ಮಹದೇವಪ್ಪ ಜೊತೆ ನಾನು ಚರ್ಚಿಸಲು ಸಿದ್ದ ಎಂದು ಸವಾಲು ಹಾಕಿದರು.

ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸಿ

ಚಾಲಕರ ನಿರ್ಲಕ್ಷ್ಯದಿಂದ ಮೈಸೂರು ಬೆಂಗಳೂರು ಹೈವೇಯಲ್ಲಿ ಅಪಘಾತಗಳು ಸಂಭವಿಸುತ್ತಿವೆ. ರಸ್ತೆಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿಲ್ಲ. ರಸ್ತೆಯನ್ನು ಸಮರ್ಪಕವಾಗಿ ನಿರ್ಮಾಣ ಮಾಡಲಾಗಿದೆ. ವಾಹನ ಸವಾರರು ವಾಹನ ಚಲಾಯಿಸುವಾಗ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

Tags: MandyaMysoreನರೇಂದ್ರ ಮೋದಿಬಿಜೆಪಿ
Previous Post

ದ್ವೇಷ ಬಿಡಿ, ತಾಕತ್​ ಇದ್ರೆ ಒಳ್ಳೆ ರಾಜನೀತಿ ನೀಡಿ : ವಿಪಕ್ಷಗಳಿಗೆ ಸದಾನಂದಗೌಡ ಸವಾಲ್​

Next Post

SUMALATHA | ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಂಡ್ಯ ಸಂಸದೆ ಸುಮಲತಾ ಕಿಡಿ #PRATIDHVANI

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
SUMALATHA | ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಂಡ್ಯ ಸಂಸದೆ ಸುಮಲತಾ ಕಿಡಿ #PRATIDHVANI

SUMALATHA | ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಂಡ್ಯ ಸಂಸದೆ ಸುಮಲತಾ ಕಿಡಿ #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada