ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರ ಕುರಿತು ಇಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಮಾತನಾಡಿದ್ದು, ಯಡಿಯೂರಪ್ಪ ಅವರು ನಮ್ಮ ಪಕ್ಷದ ಪ್ರಶ್ನಾತಿತ ನಾಯಕರು ಎಂದು ಹೇಳಿಕೆ ನೀಡಿದ್ದಾರೆ, ಈ ಕುರಿತು ಮಾತನಾಡಿದ ಅವರು, ಬಿ.ಎಸ್ ಯಡಿಯೂರಪ್ಪನವರು ಏಕಾಂಗಿಯಾಗಿ ರಾಜ್ಯ ಸುತ್ತಿ ಪಕ್ಷ ಕಟ್ಟಿದ್ದಾರೆ. ಬಿಜೆಪಿ ಈ ಮಟ್ಟಕ್ಕೆ ಬೆಳೆಯಲು ಯಡಿಯೂರಪ್ಪ ಅವರೇ ಕಾರಣ ಕರ್ತರು, ಅವರೇ ಈ ಹೇಳಿಕೆ ನೀಡಿದ್ದಾರೆ ಎಂದರೆ ಅದಕ್ಕೆ ನಮ್ಮ ಸಹಮತವಿದೆ, ರಾಜ್ಯದಲ್ಲಿ ಎರಡು ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ತಂದವರು ಯಡಿಯೂರಪ್ಪ,
ಕೇಂದ್ರ ನಾಯಕರ ಜೊತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬಂದಿರುತ್ತಾರೆ, ಅವರು ಏನೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ.
ಯಡಿಯೂರಪ್ಪ ಸಾಹೇಬ್ರು ಏನೇ ನಿರ್ಧಾರ ತೆಗೆದುಕೊಂಡಿದ್ದರೂ ಪಕ್ಷದ ಹಿತದೃಷ್ಟಿಯಿಂದ ಯೋಚಿಸಿಯೇ ತೀರ್ಮಾನ ಕೈಗೊಂಡಿರುತ್ತಾರೆ, ಎಂದು ಹೇಳಿಕೆ ನೀಡಿದ್ದಾರೆ. ಇನ್ನು ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟೀಕೆ ಮಾಡಲಿ ಮರೆಯದ ಪ್ರತಾಪ್ ಸಿಂಹ
ರಾಜ್ಯದ ಜನ ಪ್ರಜ್ಞಾವಂತರು ಕೆಲವೊಮ್ಮೆ ಯಾಮಾರುತ್ತಾರೆ, ವಿಧಾನಸಭೆ ಚುನಾವಣೆಯಲ್ಲಿ ಗ್ಯಾರೆಂಟಿ ಯೋಜನೆಗೆ ಜನ ಯಾಮಾರಿದರು, ಹಾಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು, ರಾಜ್ಯದ ಜನಕ್ಕೆ ಈಗ ತಪ್ಪಿನ ಅರಿವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ಇನ್ನು ಲೋಕಸಭಾ ಚನಾವಣೆಯ ಬಗ್ಗೆ ಮಾತನಾಡಿದೆ ಸಂಸದ ಪ್ರತಾಪ್ ಸಿಂಹ ಈ ಬಾರಿ ಬಿಜೆಪಿಗೆ ಜನರು ಮತ ನೀಡುತ್ತಾರೆ, ಮೋದಿ ಮತ್ತೊಮ್ಮೆ ಪ್ರಧಾನಿ ಆಗುತ್ತಾರೆ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿಕೆ.