ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ನಾಲ್ವರು ರಾಜಕಾರಣಿಗಳು ಸಿಎಂ ರೇಸ್ನಲ್ಲಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಶೋಭಾ, ಇಲ್ಲಿಯವರೆಗೆ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಮಾತ್ರ ಸಿಎಂ ಅಭ್ಯರ್ಥಿಯಾಗಿದ್ದರು. ಆದರೆ ಈಗ ಈ ಸಾಲಿಗೆ ಎಂಬಿ ಪಾಟೀಲ್ ಮತ್ತು ಮಲ್ಲಿಕಾರ್ಜುನ ಖರ್ಗೆ ಕೂಡ ಸೇರಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ನ ಗ್ಯಾರಂಟಿ ಕಾರ್ಡ್ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ಈ ಕಾಂಗ್ರೆಸ್ ನವರು ರಾಜ್ಯದ ಮಹಿಳೆಯರಿಗೆ 2 ಸಾವಿರ ರೂಪಾಯಿ ನೀಡೋದಾಗಿ ನಂಬಿಸುತ್ತಿದ್ದಾರೆ. ಬೇರೆ ಯಾವ ರಾಜ್ಯದಲ್ಲಿಯೂ ಕಾಂಗ್ರೆಸ್ನವರು ತಮ್ಮ ಭರವಸೆ ಈಡೇರಿಸಿಲ್ಲ ಎಂದು ಹೇಳಿದರು.
ಒಂದು ಕಾಲದಲ್ಲಿ ದೇಶದ ಮಹಿಳೆಯರು ಸೌದೆ ಒಲೆಯಲ್ಲಿ ಅಡುಗೆ ಮಾಡುತ್ತಿದ್ದರು. ಆದರೆ ಪ್ರಧಾನಿ ಮೋದಿಯಿಂದಾಗಿ ಈಗ ಎಲ್ಲರ ಮನೆಯಲ್ಲಿಯೂ ಗ್ಯಾಸ್ ಸ್ಟೌ ಸೌಕರ್ಯವಿದೆ. ಕರೆಂಟ್ ಸೌಕರ್ಯ ನೀಡಲಾಗಿದೆ. ಶೌಚಾಲಯ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು