ಮೈಸೂರು : ಸಿಎಂ ಸಿದ್ದರಾಮಯ್ಯ ತವರಲ್ಲಿ ಶ್ರೀರಾಮನ ವಿಚಾರದಲ್ಲಿ ಮತ್ತೆ ಪಾಲಿಟಿಕ್ಸ್ ಶುರುವಾಗಿದೆ ಎಂಬ ಆರೋಪ ಕೇಳಿಬಂದಿದೆ. ಜನವರಿ 22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ಹಿನ್ನೆಲೆ ಹಮ್ಮಿಕೊಳ್ಳಲಾಗಿದ್ದ ಶ್ರೀರಾಮನ ಹೆಸರಿನ ಲಕ್ಷದೀಪೋತ್ಸವಕ್ಕೆ (Laksha Deepotsava) ಪೊಲೀಸರು ಇದ್ದಕ್ಕಿದ್ದಂತೆ ಅನುಮತಿಯನ್ನ ರದ್ದುಗೊಳಿಸಿದ್ದಾರೆ

ಲಕ್ಷ ದೀಪೋತ್ಸವ ನಡೆಸಿದರೇ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂಬ ಕಾರಣ ನೀಡಿ ಅನುಮತಿ ರದ್ದುಗೊಳಿಸಿರುವುದಾಗಿ ಪೊಲೀಸರು (Mysuru Police) ತಿಳಿಸಿದ್ದಾರೆ.ಕಳೆದ 10 ದಿನಗಳ ಹಿಂದೆಯಷ್ಟೇ ಲಕ್ಷ ದೀಪೋತ್ಸವಕ್ಕೆ ಅನುಮತಿ ಕೊಟ್ಟಿದ್ದ ಪೊಲೀಸರು, ಶನಿವಾರ ಇದ್ದಕ್ಕಿದ್ದಂತೆ ಅನುಮತಿ ರದ್ದುಪಡಿಸಿದ್ದೇವೆ ಎಂದು ಪತ್ರ ನೀಡಿದ್ದಾರೆ.

ಸಂಚಾರಕ್ಕೆ ಅಡ್ಡಿ, ಕಾನೂನು ಸುವ್ಯವಸ್ಥೆ ಧಕ್ಕೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅನುಮತಿ ರದ್ದು ಮಾಡಿದ್ದೇವೆ ಎಂದು ನಗರ ಪೊಲೀಸ್ ಉಪ ಆಯುಕ್ತರು ತಿಳಿಸಿದ್ದಾರೆ. ಈ ಬಗ್ಗೆ ಲಕ್ಷದೀಪೋತ್ಸವ ಆಯೋಜಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಪೊಲೀಸರ ವಿರುದ್ಧ ರಾಮ ಭಕ್ತರು ಆಕ್ರೋಶ ಹೊರ ಹಾಕಿದ್ದಾರೆ.