ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಒಂದೇ ದಿನ ಬಾಕಿ ಇದೆ. ಲೋಕ ಸಮರದಲ್ಲಿ (parliment elevtion) ಗೆಲುವಿಗೆ ಕಾಂಗ್ರೆಸ್ ಮತ್ತು ಕಮಲ-ದಳ (Bjp-jds) ಮೈತ್ರಿ ಪಡೆ ಅಬ್ಬರದ ಪ್ರಚಾರ ನಡೆಸಿ, ಭರ್ಜರಿ ಮತಯಾಚನೆ ಮಾಡಿದೆ. ಇವತ್ತು ರಾಜ್ಯದ 14 ಕ್ಷೇತ್ರ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

ಕರ್ನಾಟಕದಲ್ಲಿ (karnataka) ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಮೊದಲ ಹಂತದ 14 ಕ್ಷೇತ್ರಗಳ ಚುನಾವಣೆ ಸನ್ನಿಹಿತವಾಗಿದ್ದು, ಏಪ್ರಿಲ್ 24ರಂದು (April 24th) ಬಹಿರಂಗ ಪ್ರಾರಕ್ಕೆ ತೆರೆ ಬೀಳಲಿದೆ. ಆ ಮೂಲಕ ಸಮಾವೇಷ,ರೋಡ್ ಶೋ (Road show), ವೇದಿಕೆ ಭಾಷಣಗಳಿಗೆ ಬ್ರೇಕ್ ಬೀಳಲಿದೆ.

ಮೊದಲ ಹಂತದ 14 ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ (6pm) ಬಹಿರಂಗ ಪ್ರಚಾರ ಮುಕ್ತಾಯವಾಗಲಿದೆ. ಈ ಹಿನ್ನೆಲೆ ಕೊನೆ ದಿನ ಎಲ್ಲಾ ಪಕ್ಷದ ಅಭ್ಯರ್ಥಿಗಳು ಅಬ್ಬರದ ಪ್ರಚಾರಕ್ಕೆ ಪ್ಲಾನ್ ಮಾಡಿದ್ದಾರೆ.ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳಿಗೆ, ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು. ಬಳಿಕ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ಇರಲಿದೆ.