ಸುಪ್ರೀಂ ಕೋರ್ಟ್ನಲ್ಲಿ (Supreme court) ಡಿಸಿಎಂ ಡಿಕೆ ಶಿವಕುಮಾರ್ಗೆ (Dcm Dk shivakumar) ಭಾರೀ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಕೇಸ್ನ ತನಿಖೆಯನ್ನು ರದ್ದುಗೊಳಿಸುವಂತೆ ಮನವಿ ಮಾಡಿ ಹಾಕಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಲು ನಿರಾಕರಿಸಿದೆ.
ಡಿಕೆಶಿ ತಮ್ಮ ವಿರುದ್ಧದ ಅಕ್ರಮ ಆಸ್ತಿಗಳಿಕೆ ಕೇಸ್ ರದ್ದುಗೊಳಿಸಲು ಡಿ.ಕೆ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸಿಬಿಐ (CBI) ಅಧಿಕಾರಿಗಳು ಡಿ.ಕೆ ಶಿವಕುಮಾರ್ ವಿರುದ್ಧ ಆಕ್ರಮ ಆಸ್ತಿಗಳಿಕೆ ಕೇಸ್ ದಾಖಲಿಸಿ ತನಿಖೆಗೆ ಮುಂದಾಗಿದ್ರು. ಆದರೆ ಇದನ್ನು ಪ್ರಶ್ನಿಸಿ ಡಿಕೆಶಿ ಕೋರ್ಟ್ ಮೆಟ್ಟಿಲೇರಿದ್ದರು.
ಈ ವಿಚಾರವಾಗಿ ಡಿ.ಕೆ ಶಿವಕುಮಾರ್ ಕೇಸ್ ರದ್ದು ಪಡಿಸಲು ಅರ್ಜಿ ಸಲ್ಲಿಸಿದರು. ಇದೀಗ ಸುಪ್ರೀಂಕೋರ್ಟ್ ಅರ್ಜಿ ವಜಾಗೊಳಿಸಿದ್ದು, ಡಿಕೆಶಿಗೆ ಹಿನ್ನಡೆಯಾಗಿದೆ. ಆ ಮೂಲಕ ಅಕ್ರ ಆಸ್ತಿ ಗಳಿಕೆ ವಿರುದ್ಧದ ತನಿಖೆಯನ್ನ ಸಿಬಿಐ ಮುಂದುವರೆಸಲಿದ್ದು, ಡಿಕೆಶಿಗೆ ಟೆನ್ಷನ್ ಹೆಚ್ಚಾಗಿದೆ.