ಉತ್ತರಾಖಂಡದ (Uttarakhand) ಶಾಸ್ತ್ರತಾಳ್ ಚಾರಣಕ್ಕೆಂದು ಕರ್ನಾಟಕದಿಂದ (Karnataka) ತೆರಳಿದ್ದ 22 ಜನರ ತಂಡ ಹವಾಮಾನ ವೈಪರೀತ್ಯಕ್ಕೆ ಸಿಲುಕಿದ್ದಾರೆ. ಈ ಪೈಕಿ 9 ಜನರು ಮೃತಪಟ್ಟಿದ್ದು, 13 ಜನರನ್ನು ರಕ್ಷಣೆ ಮಾಡಲಾಗಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (CM Siddaramaiah) ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಅಂತ ತಿಳಿಸಿದ್ದಾರೆ.

ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಡೆಹ್ರಾಡೋನ್ ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna bhairegowda) ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಮೃತರ ಸಂಖ್ಯೆ 9 ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ ಎಂದ್ರು.
ಅಲ್ಲದೆ ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲೂ ಅಗತ್ಯವಾದ ಎಲ್ಲಾ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎನ್ನುವ ಸೂಚನೆಗಳನ್ನು ಸಚಿವ ಕೃಷ್ಣಬೈರೇಗೌಡರಿಗೆ ನೀಡಿದ್ದಾರೆ.






