ಬೆಂಗಳೂರು : ಮಹಿಳಾ ಪ್ರಯಾಣಿಕರೊಟ್ಟಿಗೆ ಉಬರ್ ಚಾ;ಕ ಅಸಭ್ಯವಾಗಿ ವರ್ತಿಸಿ ತನ್ನ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿರುವ ಘಟನೆ ನಗರದ ಬಿಟಿಎಂ ಲೇಔಟ್ 2ನೇ ಹಂತದಲ್ಲಿ ನಡೆದಿದೆ. ಬಿಟಿಎಂ 2ನೇ ಹಂತದಿಂದ ಜೆಪಿನಗರ ಮೆಟ್ರೋ ಸ್ಟೇಷನ್ವರೆಗೆ ಕ್ಯಾಬ್ ಬುಕ್ ಮಾಡಿದ್ದ, ಮಹಿಳೆ ಜೊತೆ ಚಾಲಕ ಅನುಚಿತವಾಗಿ ವರ್ತಿಸಿದ್ದನ್ನು ಆಕೆ ಲಿಂಕ್ಡ್ಇನ್ನಲ್ಲಿ ಪೋಸ್ಟ್ ಹಾಕಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.
ಘಟನೆಯ ಹಿನ್ನಲೆ? ; ಬುಧವಾರ ತಡರಾತ್ರಿ ಮಹಿಳೆ ಬಿಟಿಎಂ 2ನೇ ಹಂತದಿಂದ ಜೆಪಿನಗರ ಮೆಟ್ರೋ ಸ್ಟೇಷನ್ವರೆಗೆ ಉಬರ್ ಕ್ಯಾಬ್ ಬುಕ್ ಮಾಡಿದ್ಧಾರೆ. ಕ್ಯಾಬ್ ಏರಿದ ಬಳಿಕ ಮೊದಲಿಗೆ ಚಾಲಕ ರೂಟ್ ಬದಲಿಸಿದ್ದಾನೆ. ಈ ವೇಳೆ ಮಹಿಳೆ ಆತನಿಗೆ ಸರಿಯಾದ ಮಾರ್ಗದಲ್ಲಿ ಹೋಗುವಂತೆ ಹೇಳಿದ್ಧಾಳೆ.