• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

2024 ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ-ಆರ್​ಎಸ್​ಎಸ್​ನ್ನು ನೆಲಕಚ್ಚಿಸಲು ಭೀಮ ಸಂಕಲ್ಪ ಸಮಾವೇಶ ಉದ್ಘಾಟನೆ

Any Mind by Any Mind
June 9, 2023
in ರಾಜಕೀಯ
0
2024 ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ-ಆರ್​ಎಸ್​ಎಸ್​ನ್ನು ನೆಲಕಚ್ಚಿಸಲು ಭೀಮ ಸಂಕಲ್ಪ ಸಮಾವೇಶ ಉದ್ಘಾಟನೆ
Share on WhatsAppShare on FacebookShare on Telegram

ಬೆಂಗಳೂರು : ಬೆಂಗಳೂರು, ಜೂನ್ 9: ವಿಗ್ರಹ ಇಟ್ಟುಕೊಂಡು ವಿಚಾರಗಳನ್ನು ಕೊಲ್ಲುವುದು ಬಿಜೆಪಿ(BJP) ಪರಿವಾರದ ಚಾಳಿ. ಸಂವಿಧಾನ ವಿರೋಧಿಸುವ ಬಿಜೆಪಿ ಚುನಾವಣೆಗಾಗಿ ಅಂಬೇಡ್ಕರ್ ಪ್ರತಿಮೆಯನ್ನು ಇಟ್ಟುಕೊಂಡು ಡ್ರಾಮಾ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.ರಾಜ್ಯದ ದಲಿತ ಸಂಘಟನೆಗಳು ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ‘ಭೀಮ ಸಂಕಲ್ಪ’ ಸಮಾವೇಶವನ್ನು(Bheema sankalpa samavesha) ಉದ್ಘಾಟಿಸಿ ಮಾತನಾಡಿದರು.

ADVERTISEMENT

ಅಂಬೇಡ್ಕರ್ ಅವರು ಸಂವಿಧಾನ ಜಾರಿಗೊಳ್ಳುವ ಹಿಂದಿನ ದಿನ ಐತಿಹಾಸಿಕ ಭಾಷಣ ಮಾಡುತ್ತಾ, “ಸಾಮಾಜಿಕ, ಆರ್ಥಿಕ ಅಸಮಾನತೆಯನ್ನು ತೊಡೆದು ಹಾಕದಿದ್ದರೆ ಈ ಸ್ವಾತಂತ್ರ್ಯ ಸೌಧವನ್ನು ದೇಶದ ಜನರೇ ಧ್ವಂಸ ಮಾಡುತ್ತಾರೆ” ಎಂದು ಎಚ್ಚರಿಸಿದ್ದರು. ಜಾತಿ ಸಮಾಜಕ್ಕೆ ಚಲನೆ ಇರುವುದಿಲ್ಲ. ಚಾಲನೆ ಬರಬೇಕಾದರೆ ಸಂವಿಧಾನಬದ್ದವಾದ ಜಾತ್ಯತೀತ ಮೌಲ್ಯಗಳು ಜಾರಿಯಾಗಿ ಶೋಷಿತ ಸಮುದಾಯಗಳಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಅವಕಾಶಗಳನ್ನು ಕಲ್ಪಿಸಿಕೊಡಬೇಕು. ಈ ಅವಕಾಶಗಳನ್ನು ಕಲ್ಪಿಸುವುದೇ ನನ್ನ ರಾಜಕೀಯ ಬದ್ಧತೆ ಎಂದರು.

ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್ ಶಾ ಅವರಾಗಲಿ, ಪ್ರಧಾನಿ ಮೋದಿ ಅವರಾಗಲಿ ಕ್ರಮ ಕೈಗೊಳ್ಳದೆ ಸುಮ್ಮನೆ ಕುಳಿತರು. ಆದರೆ, ನಾವು-ನೀವು ಸುಮ್ಮನೆ ಕೂರಲಿಲ್ಲ. ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ. ಇದು 2024 ರಲ್ಲೂ ಪ್ರತಿಧ್ವನಿಸಬೇಕು, ಮರುಕಳಿಸಬೇಕು ಎಂದು ಕರೆ ನೀಡಿದರು.

13 ಬೇಡಿಕೆಗಳಿಗೆ ಸ್ಪಂದನೆ
ಐಕ್ಯ ಹೋರಾಟ ಚಾಲನಾ ಸಮಿತಿ ಸಲ್ಲಿಸಿದ 13 ಬೇಡಿಕೆಗಳ ಕುರಿತು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಇವುಗಳಲ್ಲಿ ಹಲವು ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಉಳಿದವುಗಳನ್ನೂ ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ದಲಿತ ಮುಖಂಡರುಗಳಾದ ಎಸ್.ಮರಿಸ್ವಾಮಿ, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ಇಂದೂದರ ಹೊನ್ನಾಪುರ, ಜಿಗಣಿ ಶಂಕರ್, ವಿ.ನಾಗರಾಜ್, ಎನ್.ವೆಂಕಟೇಶ್ ಸೇರಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ 50 ಕ್ಕೂ ಹೆಚ್ಚು ಮುಖಂಡರುಗಳು ಉಪಸ್ಥಿತರಿದ್ದರು.

ಬಾಕ್ಸ್
ಗ್ಯಾರಂಟಿಗಳನ್ನು ವಿಫಲಗೊಳಿಸಲು ಬಿಜೆಪಿ ಹುನ್ನಾರ

ದೇಶದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸದೆ ವಂಚಿಸಿದ ಬಿಜೆಪಿ , ನುಡಿದಂತೆ ನಡೆದ ನಮ್ಮನ್ನು ಟೀಕಿಸುತ್ತಿದ್ದಾರೆ. ಬಡವರ- ಮಧ್ಯಮ ವರ್ಗದವರ ಕಲ್ಯಾಣಕ್ಕೆ ನಾವು ನೀಡಿರುವ ಗ್ಯಾರಂಟಿಗಳನ್ನು ವಿಫಲಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಇದಕ್ಕಾಗಿ ಸುಳ್ಳುಗಳನ್ನು ಹೊಸೆದು, ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ನಾಡಿನ ಶೇ85 ಕ್ಕೂ ಹೆಚ್ಚು ಜನರಿಗೆ ತಲುಪುತ್ತದೆ. ಉಳಿದವು ಇನ್ನೂ ಹೆಚ್ಚಿನ ಸಂಖ್ಯೆಯ ಜನರಿಗೆ ತಲುಪುತ್ತದೆ ಎಂದು ತಿಳಿಸಿದರು.

Tags: BangaloreBhima Sankalpa SamaveshBJPLok Sabha ElectionsRSSsiddaramaiahTown Hall
Previous Post

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕ‌ಕಾಲಕ್ಕೆ ‘ಶಕ್ತಿ’ಗೆ ಚಾಲನೆ

Next Post

‘ಬಾಡಿಗೆ ಭಾಷಣಕಾರರೆಲ್ಲ ಲೇಖಕರಾ? ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ’

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
Next Post
‘ಬಾಡಿಗೆ ಭಾಷಣಕಾರರೆಲ್ಲ ಲೇಖಕರಾ? ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ’

‘ಬಾಡಿಗೆ ಭಾಷಣಕಾರರೆಲ್ಲ ಲೇಖಕರಾ? ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ’

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada