• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೆ.6ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ:ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
September 2, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು,:”ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಮಾಹಿತಿ ನೀಡಿದರು.”ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೆ” ಎಂದು ತಿಳಿಸಿದರು.

“ಈ ಯೋಜನೆಗಳ ವಿಚಾರವಾಗಿ ಅನೇಕ ಟೀಕೆಗಳು ಬರುತ್ತಿದ್ದವು. ಟೀಕೆಗಳು ಬರಲಿ. ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಈ ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿವೆ.

ಈಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟಿಗೆ ನೀರು ಹರಿಸಲಾಗುತ್ತಿದೆ.ಯೋಜನೆಯ 7 ವಿಯರ್ ಗಳು ನೀರನ್ನು ಎತ್ತುತ್ತಿವೆ ಈ ತಿಂಗಳ 6 ರಂದು ಉದ್ಘಾಟನೆಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ” ಎಂದು ತಿಳಿಸಿದರು.

ಸಿಎಂ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಯಾವ ವಿಚಾರ ಚರ್ಚೆಯಾಯಿತು ಎಂದು ಕೇಳಿದಾಗ, “ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಂಡಿವೆ. ಈಗ ಆ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕೂತಿದ್ದಾರೆ. ಗಾಂಧೀಜಿ ಅವರು ಹಾಕಿಕೊಟ್ಟಿರುವ ಮಾರ್ಗದರ್ಶನ ವಿಶ್ವವೇ ಗಮನಿಸಿದೆ.ಇದನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಿದೆ.ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಯಿತು.ಮುಂದಿನ ಒಂದುವಾರದಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವರದಿ ನೀಡುವಂತೆ ಸಚಿವರಿಗೆ ತಿಳಿಸಲಾಗಿದೆ ಪಕ್ಷದ ವತಿಯಿಂದಲೂ ಕಾರ್ಯಕ್ರಮ ಮಾಡಲಾಗುತ್ತಿದ್ದು, ಆ ಬಗ್ಗೆ ಪಕ್ಷದ ಕಚೇರಿಯಲ್ಲಿ ಚರ್ಚೆ ಮಾಡಿದ್ದೆವು” ಎಂದು ತಿಳಿಸಿದರು.

ರಾಜಭವನದಲ್ಲಿ ವಿರೋಧ ಪಕ್ಷಗಳ ನಾಯಕರ ವಿರುದ್ಧ ಯಾವುದೇ ಅರ್ಜಿ ಇಲ್ಲ ಎಂದು ರಾಜ್ಯಪಾಲರು ಹೇಳಿದ್ದು, ಹಾಗಾದರೆ ಫೈಲ್ ಗಳು ಏನಾದವು ಎಂದು ಕೇಳಿದಾಗ, “ನಮಗೂ ಅದೇ ಯಕ್ಷಪ್ರಶ್ನೆಯಾಗಿದೆ. ನಾಳೆ ಈ ವಿಚಾರವಾಗಿ ಮಾಹಿತಿ ಪಡೆಯುತ್ತೇವೆ ನಾವು ನಮಗೆ ಬಂದಿರುವ ಮಾಹಿತಿಗಳ ಮೇರೆಗೆ ನಮ್ಮ ಮನವಿ ಸಲ್ಲಿಸಿದ್ದೇವೆ” ಎಂದು ತಿಳಿಸಿದರು.

ಕಾಲೇಜು ದಿನಗಳಲ್ಲಿ ಬಳಸಿದ್ದ ಬೈಕ್ ಮಾರುವಿನ್ಯಾಸ:ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಲೇಜು ದಿನಗಳಲ್ಲಿ ಬಳಸಿದ್ದ ಯಜ್ದಿ ಬೈಕ್ ಅನ್ನು ಮರುವಿನ್ಯಾಸಗೊಳಿಸಿ ಅವರಿಗೆ ನೀಡಿದರು.ಈ ಬಗ್ಗೆ ಮಾತನಾಡಿದ ಶಿವಕುಮಾರ್ ಅವರು, “ನಾನು ಕಾಲೇಜು ದಿನಗಳಲ್ಲಿ ಈ ಬೈಕ್ ಓಡಿಸುತ್ತಿದ್ದೆ. ಕನಕಪುರದ ನಿವಾಸದಲ್ಲಿತ್ತು.ನಮ್ಮ ಸ್ನೇಹಿತರು ಈಗ ಅದಕ್ಕೆ ಹೊಸ ರೂಪ ಕೊಟ್ಟು ತಂದಿದ್ದಾರೆ” ಎಂದು ತಿಳಿಸಿದರು.

Tags: Congress PartyDCM DK ShivakumarInauguration of Ettinhole project
Previous Post

ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಬಹುಮಾನ ಗೆಲ್ಲಿ

Next Post

ತಮಿಳುನಾಡಿನಲ್ಲಿ 400 ಕೋಟಿ ಹೂಡಿಕೆ ಮಾಡಿದ ಅಮೆರಿಕ ಕಂಪೆನಿ

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
Next Post

ತಮಿಳುನಾಡಿನಲ್ಲಿ 400 ಕೋಟಿ ಹೂಡಿಕೆ ಮಾಡಿದ ಅಮೆರಿಕ ಕಂಪೆನಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada