ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಾವೇರಿಯಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳ ಜನಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಇದೇ ವೇಳೆ ಲೋಕೋಪಯೋಗಿ ಇಲಾಖೆ ನಿರ್ಮಿಸಿರುವ ನೂತನ ವಿವಿಐಪಿ ಸರ್ಕೀಟ್ ಹೌಸ್ ಕಟ್ಟಡವನ್ನು ಸಚಿವರಾದ ಸತೀಶ್ ಜಾರಕಿಹೊಳಿ ಅವರು. ಉದ್ಘಾಟಿಸಿದರು. ಬಳಿಕ ನೆಲೋಗಲ್ಲ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುವ ಸರ್ಕೀಟ್ ಹೌಸ್ ಕಟ್ಟಡದ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮುಖ್ಯಮಂತ್ರಿಗಳು ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಉದ್ಘಾಟನೆ ನೆರವೇರಿಸುವ ಜೊತೆಗೆ ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಜನಾರ್ಪಣೆಗೊಳಿಸಿ, ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಕೆ.ಪಾಟೀಲ್, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕರೂ, ಉಪಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜಿಲ್ಲೆಯ ಶಾಸಕರುಗಳು, ಮುಖಂಡರು ಉಪಸ್ಥಿತರಿದ್ದರು.






