ಸಿಲಿಕಾನ್ ಸಿಟಿಯಲ್ಲಿ ಇಂದು ಹಲವೆಡೆ ಐಟಿ ದಾಳಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೆಜಿಎಫ್ ಬಾಬು ಮನೆಯ ಮೇಲೆ ಐಟಿ ದಾಳಿ ನಡೆಸಿದ್ದು, ಬೆಂಗಳೂರಿನ ಹೈಗ್ರೌಂಡ್ಸ್ ಬಳಿ ಇರುವ ಕೆಜಿಎಫ್ ಬಾಬು ನಿವಾಸದ ಮೇಲೆ ಐಡಿ ರೇಡ್ ಆಗಿದೆ.

ಇಂದು ಮುಂಜಾನೆಯಿಂದಲೇ ಐಟಿ ದಾಳಿ ನಡೆಸಲು ಶುರುಮಾಡಿದೆ. ಹಲವಾರು ಕಾಂಗ್ರೆಸ್ ನಾಯಕರ ನಿವಾಸದ ಮೇಲೂ ದಾಳಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ರುಕ್ಸಾನಾ ಪ್ಯಾಲೇಸ್ ಮೇಲೆ ಕೂಡ ಐಟಿ ದಾಳಿ ನಡೆಸಿದ್ದಾರೆ. ಒಟ್ಟು 50 ಕಡೆಗಳಲ್ಲಿ ಐಟಿ ದಾಳಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.







