ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆಯಿಂದಾಗಿ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಕೂಡ ಏರಿಕೆಯಾಗಲಿದೆ. ಹಾಲು ಮಾರಾಟ ದರವನ್ನು ಲೀಟರ್ಗೆ 3 ರೂ. ಹೆಚ್ಚಿಸುವ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರಾಜ್ಯ ಹಾಲು ಮಹಾಮಂಡಳದ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ತಿಳಿಸಿದರು.
ಈ ಬಗ್ಗೆ ಸ್ವತಃ ಕರ್ನಾಟಕ ಹಾಲು ಒಕ್ಕೂಟ ನಿರ್ದೇಶಕ ಸತೀಶ್ ರವರು ಮಾಹಿತಿ ನೀಡಿದ್ದು, ನಂದಿನಿ ಹಾಲಿನ ಪಾಕೆಟ್ ದರ ಹೆಚ್ಚಳಕ್ಕೆ 14 ಜಿಲ್ಲೆಗಳ ಹಾಲಿನ ಒಕ್ಕೂಟದವರು ಒತ್ತಡ ಮಾಡ್ತಿದ್ದಾರೆ. ಹಾಲಿನ ದರ ಹೆಚ್ಚಳ ಮಾಡಿದರೆ ಅದನ್ನೇ ರೈತರಿಗೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ನಂದಿನಿ ಹಾಲಿನ ಪಾಕೆಟ್ ದರ ಏರಿಕೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಾಧಕ ಬಾಧಕ ನೋಡಿ ಬಳಿಕ ನಿರ್ಧಾರ ತಗೆದುಕೊಳ್ಳೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಸತೀಶ್ ಹೇಳಿದ್ದಾರೆ.
ಪ್ರಸ್ತುತ ಪ್ರತೀ ಲೀಟರ್ ಹಾಲಿನ ಪಾಕೆಟ್ ದರ 37 ರೂ ಇದ್ದು, ಸರ್ಕಾರ ಒಪ್ಪಿದರೆ 40 ರೂ ಆಗಲಿದೆ. ಹೀಗಾಗಿ ಗ್ರಾಹಕರಿಗೆ ಸಣ್ಣ ಹೊರೆಯಾದ್ರು ಆ ದರವನ್ನು ಕಷ್ಟದಲ್ಲಿರುವ ಹಾಲು ಉತ್ಪಾದಕರಿಗೆ ನೀಡಲಾಗುತ್ತಿದ್ದು, ಗ್ರಾಹಕರ ಸಹಕರಿಸಬೇಕೆಂದು KMF ಎಂಡಿ ಸತೀಶ್ ಮನವಿ ಮಾಡಿದರು.