ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಸ್ಟೇಡಿಯಂನಲ್ಲಿ ಜನಸಾಗರವೇ ಜಮಾಹಿಸಿದೆ.
ಭಾರತ ಗೆದ್ದೆ ಗೆಲ್ಲುತ್ತದೆ ಎಂಬ ಭರವಸೆವನ್ನು ಇಟ್ಟುಕೊಂಡು ಪ್ರೇಕ್ಷಕರು ತ್ರಿವರ್ಣ ಧ್ವಜ ಹಿಡಿದ ಭಾರತ ಪರ ಜಯಘೋಷ ಮೊಳಗಿಸುತ್ತಾ ಶುಭ ಕೋರುತ್ತಿದ್ದಾರೆ.
ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸಚಿನ್ ತೆಂಡೂಲ್ಕರ್
ಎಲ್ಲರೂ ಈ ದಿನಕ್ಕಾಗಿ ಕಾಯುತ್ತಿದ್ದಾರೆ. ನಾನು ಟೀಂ ಇಂಡಿಯಾಗೆ ಶುಭಾಶಯ ಹೇಳಲು ಬಂದಿದ್ದೇನೆ. ವಿಶ್ವಕಪ್ಗಾಗಿ ಹಣಾಹಣಿಯಲ್ಲಿರುವ ಭಾರತ ಟ್ರೋಫಿ ಎತ್ತಿಹಿಡಿಯುವ ನಿರೀಕ್ಷೆಯಿದೆ ಎಂದು ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.
ಫೈನಲ್ ಪಂದ್ಯಕ್ಕೆ 6,000 ಪೊಲೀಸರ ನಿಯೋಜನೆ
ವಿಶ್ವಕಪ್ ಗ್ರ್ಯಾಂಡ್ ಫಿನಾಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್ ಸೇರಿದ್ದಾರೆ ಹಲವು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಭದ್ರತೆಗಾಗಿ ಸುಮಾರು 6,000 ಪೊಲೀಸರನ್ನು ನಿಯೋಜಿಸಲಾಗಿದೆ.