ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 240 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಸ್ಟ್ರೇಲಿಯಾಗೆ 241 ಟಾರ್ಗೆಟ್ ನೀಡಿದೆ. ಇದೇ ಮೊದಲ ಬಾರಿಗೆ ಭಾರತ ಈ ವಿಶ್ವಕಪ್‌ನಲ್ಲಿ ಆಲೌಟ್ ಆಗಿದೆ. ರಸ್ ಗಳಿಸುವುದಕ್ಕೂ ಸೆಣೆಸಾಟ ನಡೆಸಿದೆ.
ಶುಭಮನ್ ಗಿಲ್ ಕೇವಲ 4 ರನ್ ಗಳಿಸಿ ಔಟಾದರು, ರೋಹಿತ್ 31 ಎಸೆತಗಳಲ್ಲಿ 4 ಬೌಂಡರಿ 3 ಸಿಕ್ಸರ್ ಸಹಿತ 47 ರನ್ ಗಳಿಸಿದರು. ನಂತರ ಬಂದ ಶ್ರೇಯಸ್ ಅಯ್ಯರ್ ಕೂಡ 4 ರನ್ ಗಳಿಸಿ ಔಟಾದರು.
54 ರನ್ ಗಳಿಸಿದ ಕೊಹ್ಲಿ ಔಟಾದರು. ನಂತರ ಬಂದ ರವೀಂದ್ರ ಜಡೇಜಾ 9 ರನ್ ಗಳಿಸಿ ಔಟಾದರೆ, ಕೆಎಲ್ ರಾಹುಲ್ 66 ರನ್ ಗಳಿಸಿದ್ದಾಗ ಔಟಾದರು. ಮೊಹಮ್ಮದ್ ಶಮಿ 6, ಬುಮ್ರಾ 1 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ ಕೂಡ 18 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕುಲದೀಪ್ ಯಾದವ್ 18 ರನ್ ಗಳಿಸಿದರೆ, ಮೊಹಮ್ಮದ್ ಸಿರಾಜ್ 9 ರನ್ ಗಳಿಸಿದರು.

ಆಸ್ಟ್ರೇಲಿಯಾ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ನಡುವೆ ಕೂಡ ರೋಹಿತ್ ಶರ್ಮಾ ಸ್ಫೋಟಕ ಇನ್ನಿಂಗ್ಸ್ ಆಡಿದರು.