• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

IND vs AUS: ಸೆಂಚುರಿ ಸಿಡಿಸಿದ ನಿತೀಶ್ ಕುಮಾರ್ ರೆಡ್ಡಿ. ಟೀಮ್ ಇಂಡಿಯಾ ದಿಟ್ಟ ಹೋರಾಟ

ಪ್ರತಿಧ್ವನಿ by ಪ್ರತಿಧ್ವನಿ
December 28, 2024
in Top Story, ಅಂಕಣ, ಇದೀಗ, ಕ್ರೀಡೆ, ದೇಶ, ವಾಣಿಜ್ಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 295 ರನ್​​ಗಳ ಭರ್ಜರಿ ಜಯ ಸಾಧಿಸಿತ್ತು. ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಗೆಲುವು ಸಾಧಿಸಿತ್ತು. ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಮೆಲ್ಬೋರ್ನ್​ನಲ್ಲಿ ಉಭಯ ತಂಡಗಳು 4ನೇ ಟೆಸ್ಟ್ ಪಂದ್ಯವನ್ನಾಡುತ್ತಿದೆ.

ADVERTISEMENT

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 474 ರನ್​​ಗಳಿಸಿ ಆಲೌಟ್ ಆಗಿದೆ. ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಪರ ನಿತೀಶ್ ಕುಮಾರ್ ರೆಡ್ಡಿ ಶತಕ ಸಿಡಿಸಿದ್ದು, ಈ ಮೂಲಕ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ದಿಟ್ಟ ಹೋರಾಟವನ್ನೇ ಪ್ರದರ್ಶಿಸಿದೆ.

ಆದಿಚುಂಚನಗಿರಿಯಲ್ಲಿ MLA Munirathnaಪ್ರಮಾಣ ಮಾಡ್ಲಿ ಅಂತ ಸವಾಲು ಹಾಕಿದ ದೂರುದಾರೆ #pratidhvani #politics #bjp

ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ನಿತೀಶ್ ಕುಮಾರ್ ರೆಡ್ಡಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ 171 ಎಸೆತಗಳಲ್ಲಿ ಚೊಚ್ಚಲ ಶತಕ ಪೂರೈಸಿದರು.

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 3 ರನ್​ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 24 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಯಶಸ್ವಿ ಜೈಸ್ವಾಲ್ ಶತಕದ ಜೊತೆಯಾಟ ಪ್ರದರ್ಶಿಸಿದರು. ಆದರೆ ತಂಡದ ಮೊತ್ತ 153 ರನ್ ಆಗಿದ್ದ ವೇಳೆ ರನ್​ ಕದಿಯುವ ಯತ್ನದಲ್ಲಿ ಯಶಸ್ವಿ ಜೈಸ್ವಾಲ್ (82) ರನೌಟ್ ಆಗಿ ಹೊರ ನಡೆದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (36) ಸಹ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಆಕಾಶ್ ದೀಪ್ (0) ಶೂನ್ಯಕ್ಕೆ ಔಟಾದರೆ, ರಿಷಭ್ ಪಂತ್ 28 ರನ್​ಗಳಿಸಲಷ್ಟೇ ಶಕ್ತರಾದರು.

ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ಕುಮಾರ್ ರೆಡ್ಡಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯೊಂದಿಗೆ ರನ್ ಗಳಿಸುತ್ತಾ ಸಾಗಿದ ನಿತೀಶ್ 81 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿಯ ಬಳಿಕ ಆಸೀಸ್ ಬೌಲರ್​​ಗಳನ್ನು ಕಾಡಿದ ಯುವ ದಾಂಡಿಗ ಟೀಮ್ ಇಂಡಿಯಾ ಮೊತ್ತವನ್ನು 300ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ 3ನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 9 ವಿಕೆಟ್ ಕಳೆದುಕೊಂಡು 358 ರನ್ ಕಲೆಹಾಕಿದೆ.  

Tags: 4th TestAkash DeepAustraliaBorder GavaskarGowtham GambhirIndiaMCG StadiumMelbournNithish Kumar ReddyRahul DravidRIshab PanthTeam IndiaVirat KolhiYashasvi jaiswal
Previous Post

ಕಟ್ಟೆಮಾಡು ವಾರ್ಷಿಕ ಜಾತ್ರೆಯಲ್ಲಿ ಎರಡು ಗುಂಪಿನ ನಡುವೆ ಘರ್ಷಣೆ….

Next Post

ಹೊಸ ವರ್ಷಕ್ಕೆ|ಪೊಲೀಸ್ ಸಿಬ್ಬಂದಿಗೆ ಕಟ್ಟುನಿಟ್ಟಾಗಿ ನಿಯಮಗಳನ್ನ ಪಾಲಿಸುವಂತೆ ಸೂಚನೆ

Related Posts

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ
ಕ್ರೀಡೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

by ಪ್ರತಿಧ್ವನಿ
April 16, 2026
0

ಐಪಿಎಲ್ 2026ರ 24ನೇ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಮುಂಬೈನ ವಾಂಖೆಡೆ...

Read moreDetails
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post

ಹೊಸ ವರ್ಷಕ್ಕೆ|ಪೊಲೀಸ್ ಸಿಬ್ಬಂದಿಗೆ ಕಟ್ಟುನಿಟ್ಟಾಗಿ ನಿಯಮಗಳನ್ನ ಪಾಲಿಸುವಂತೆ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada