ಆರು ರಾಜ್ಯಗಳಲ್ಲಿನ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ‘ಇಂಡಿಯಾʼ ಮೈತ್ರಿಕೂಟ ನಾಲ್ಕು ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಬಲವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಈ ಬಗ್ಗೆ ಶನಿವಾರ (ಸೆಪ್ಟೆಂಬರ್ 9) ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಇಂಡಿಯಾ ಮೈತ್ರಿಕೂಟ ತುಂಬಾ ಬಲವಾಗಿದ್ದು, ಇದು ಬಿಜೆಪಿಯ ಆತಂಕಕ್ಕೆ ಕಾರಣವಾಗಿದೆ. ಇದರಿಂದಲೇ ಬಿಜೆಪಿ ದೇಶದ ಹೆಸರನ್ನು ಬದಲಾಯಿಸಲು ಮುಂದಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು.
7 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 3, ಇಂಡಿಯಾ ಮೈತ್ರಿಕೂಟ 4 ಸ್ಥಾನಗಳಲ್ಲಿ ಜಯಗಳಿಸಿವೆ.