ಪುರುಷರ ಏಕದಿನ ವಿಶ್ವಕಪ್ 2023ರ ಫೈನಲ್‌ಗೆ ಭಾರತ ಕ್ರಿಕೆಟ್ ತಂಡ ಪ್ರವೇಶ ಪಡೆದುಕೊಂಡಿದೆ. ಈ ಮೂಲಕ 3ನೇ ಬಾರಿಗೆ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಕನಸಿಗೆ ಲಗ್ಗೆ ಇಟ್ಟಿದೆ. ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದ್ದು 70 ರನ್‌ಗಳ ಭರ್ಜರಿ ಅಂತರದಿಂದ ಗೆಲುವು ಸಾಧಿಸಿದೆ.
ಇಂದಿನ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ ತಂಡ ಭರ್ಜರಿ 397 ರನ್‌ಗಳನ್ನು ಕಲೆಹಾಕಿತ್ತು. ವಿರಾಟ್ ಕೊಹ್ಲಿಯ ವಿಶ್ವದಾಖಲೆಯ ಶತಕ ಹಾಗೂ ಶ್ರೇಯಸ್ ಐಯ್ಯರ್ ಅವರ ಅಮೋಘ ಶತಕದ ಕಾರಣದಿಂದಾಗಿ ಟೀಮ್ ಇಂಡಿಯಾ ಬೃಹತ್ ಮೊತ್ತವನ್ನು ಕಲೆಹಾಕಿತ್ತು.
ಈ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲ್ಯಾಂಡ್ ತಂಡ ಕೂಡ ಅದ್ಭುತ ಪ್ರದರ್ಶನ ನೀಡಿತು. ಆದರೆ ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ಅಮೋಘ ಬೌಲಿಂಗ್ಗೆ ಕಿವಿಸ್ ಬ್ಯಾಟ್ಸ್‌ಮನ್‌ಗೆ ದೊಡ್ಡ ಆಘಾತ ನೀಡಿತು. ಈ ಮೂಲಕ ಶಮಿ ಏಳು ವಿಕೆಟ್‌ಗಳನ್ನು ಪಡೆದು ಭಾರತದ ಗೆಲುವಿನಲ್ಲಿ ಮತ್ತೊಮ್ಮೆ ದೊಡ್ಡ ಪಾತ್ರವನ್ನು ನಿರ್ವಹಿಸಿದ್ದಾರೆ.

ಈ ಮೂಲಕ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ನಾಲ್ಕನೇ ಬಾರಿಗೆ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.