ಕೋವಿಡ್ ಚಿಕಿತ್ಸಾ ವಿಧಾನದಿಂದ ಪ್ಲಾಸ್ಮಾ ಥೆರಪಿಯನ್ನು ಕೈಬಿಟ್ಟ ಭಾರತ..!

ಕೋವಿಡ್-19 ರಾಷ್ಟ್ರೀಯ ಕ್ಲಿನಿಕಲ್ ಮ್ಯಾನೇಜ್ಮೆಂಟ್ ಪ್ರೊಟೊಕಾಲ್ ನಿಂದ ಪ್ಲಾಸ್ಮಾ ಥೆರಪಿ(CPT) ಯನ್ನು ಕೈಬಿಟ್ಟಿದೆ. ಸೋಂಕಿತರಿಗೆ ಚೇತರಿಸಿಕೊಳ್ಳಲು ಈಗಾಗಲೇ ಚೇತರಿಸಿಕೊಂಡವರ ರಕ್ತದ ಪ್ಲಾಸ್ಮಾವನ್ನು ಈ ವಿಧಾನದಲ್ಲಿ ನೀಡಲಾಗುತ್ತಿತ್ತು.

ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೋವಿಡ್ ಸೋಂಕಿತರಲ್ಲಿ ಪ್ಲಾಸ್ಮಾ ಥೆರಪಿಯು ಯಾವುದೇ ಪ್ರಯೋಜನಗಳನ್ನು ನೀಡುವುದಿಲ್ಲ ಎಂದು ಆರೋಗ್ಯ ಸಚಿವಾಲಯ ಹಾಗೂ AIIMS-ICMR ಕೋವಿಡ್ ರಾಷ್ಟ್ರೀಯ ಟಾಸ್ಕ್ ಫೋರ್ಸ್ ನಿರ್ಧರಿಸಿದೆ.

ಸಾಮಾನ್ಯ ಆರೈಕೆಗೆ ಹೋಲಿಸಿದರೆ, ಪ್ಲಾಸ್ಮಾ ಥೆರಪಿಯು ಮರಣದ ಪ್ರಮಾಣವನ್ನು ಕಡಿಮೆಗೊಳಿಸಲು ಯಾವುದೇ ಹೆಚ್ಚಿನ ಕೊಡುಗೆ ನೀಡಿಲ್ಲವೆಂದು ಹೊಸ ಅಧ್ಯಯನವು ಲ್ಯಾನ್ಸೆಟ್ ಮೆಡಿಕಲ್ ಜರ್ನಲ್‌ನಲ್ಲಿ ಪ್ರಕಟವಾದ ಮೂರೇ ದಿನಗಳಲ್ಲಿ ಈ ನಿರ್ಧಾರ ತಳೆಯಲಾಗಿದೆ.

ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳಲ್ಲಿ ಪ್ಲಾಸ್ಮಾ ಥೆರಪಿಯು ಯಾವುದೇ ಹೆಚ್ಚಿನ ಬದಲಾವಣೆಯನ್ನು ಮಾಡುತ್ತಿಲ್ಲ, ನಿರೀಕ್ಷಿತ ಫಲಿತಾಂಶಗಳು ಬರುತ್ತಿಲ್ಲ ಎಂದು ಅಧ್ಯಯನಕಾರರು ಹೇಳಿದ್ದಾರೆ.

ಚೀನಾ ಮತ್ತು ನೆದರ್‌ಲ್ಯಾಂಡ್ಸ್‌ನಲ್ಲಿ ನಡೆಸಿದ ಇದೇ ಮಾದರಿಯ ಅಧ್ಯಯನಗಳು ಕೂಡಾ, ಆಸ್ಪತ್ರೆಗೆ ದಾಖಲಾದ ಕೋವಿಡ್ -19 ರೋಗಿಗಳಲ್ಲಿ ವೈದ್ಯಕೀಯ ಫಲಿತಾಂಶಗಳನ್ನು ಸುಧಾರಿಸುವಲ್ಲಿ ಪ್ಲಾಸ್ಮಾ ಥೆರಪಿಯಿಂದ ಯಾವುದೇ ಮಹತ್ವದ ಪ್ರಯೋಜನವಿಲ್ಲವೆಂದು ಸಾಬೀತುಪಡಿಸಿದೆ.

ಕೋವಿಡ್ ಚಿಕಿತ್ಸೆಗೆ ನಿರ್ದಿಷ್ಟ ಚಿಕಿತ್ಸಾ ವಿಧಾನ ಇಲ್ಲದಿರುವುದರಿಂದ ಪ್ಲಾಸ್ಮಾ ಥೆರಪಿ, Remdevisir, Ivermectin ಹಾಗೂ ಕೆಲವು ಸ್ಟಿರಾಯಿಡ್‌ಗಳ ಮೊರೆ ಹೋಗಲಾಗುತ್ತಿದೆ. DRDO ಅಭಿವೃದ್ಧಿ ಪಡಿಸಿದ ಔಷಧಿ ಚಾಲನೆಗೆ ಬಂದಿದ್ದರೂ ಅದರ ಕುರಿತ ಸಂದೇಹಗಳು ಇನ್ನೂ ಇವೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...