ಅಸ್ಸಾಂನ ದಿಬ್ರುಗಢ್‌ನ ಭೋಗಾಲಿ ಪಥ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ (ASF) ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅಸ್ಸಾಂ ಸರ್ಕಾರ ಹಂದಿ ಮಾಂಸ ಸೇವಿಸದಂತೆ ಸೂಚಿಸಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ದಿಬ್ರುಗಢ್ ಪಶುಸಂಗೋಪನೆ ಮತ್ತು ಪಶುವೈದ್ಯಾಧಿಕಾರಿ ಡಾ.ಹಿಮಂದು ಬಿಕಾಶ್ ಬರುವಾ, ಇಲ್ಲಿನ ಹಂದಿಯೊಂದರಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿದ್ದು, ಆ ಪ್ರದೇಶದ 1 ಕಿಮೀ ವ್ಯಾಪ್ತಿಯಲ್ಲಿರುವ ಎಲ್ಲಾ ಹಂದಿಗಳನ್ನು ಕೊಲ್ಲಲಾಗಿದೆ.
ಜೊತೆಗೆ ವ್ಯಾಪ್ತಿ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಘೋಷಿಸಿದ್ದು ಕೊಂದ ಹಂದಿಗಳನ್ನು ಹೂಳಲಾಗಿದೆ. ಅದೇ ಸಮಯದಲ್ಲಿ, ನಾವು ಇಡೀ ಪ್ರದೇಶವನ್ನು ಸ್ಯಾನಿಟೈಸ್ ಮಾಡಿ, ಏಕಕಾಲದಲ್ಲಿ ಶುಚಿಗೊಳಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಆಫ್ರಿಕನ್ ಹಂದಿ ಜ್ವರವು ಹಂದಿಗಳಿಗೆ ಮಾರಣಾಂತಿಕ ಅಷ್ಟೇ, ಹೆಚ್ಚು ಸಾಂಕ್ರಾಮಿಕವಾಗಿದ್ದರೂ ಮನುಷ್ಯರಿಗೆ ಸೋಂಕು ಹರಡುವುದಿಲ್ಲ. ಹೀಗಾಗಿ ಆತಂಕಕೊಳ್ಳಕಾಗಬಾರದೆಂದು ತಜ್ಞರು ತಿಳಿಸಿದ್ದಾರೆ.