ಭಾರತದ ಕಾಶ್ಮೀರದಲ್ಲಿ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಗೆ ಈಗಾಗಲೇ ಭಾರತದಾದ್ಯಂತ ಆಕ್ರೋಶದ ಕಟ್ಟೆಯೊಡೆದಿದ್ದು, ಇಡೀ ದೇಶ ಈಗಾಗಲೇ ಪಾಕಿಸ್ತಾನದ ವಿರುದ್ಧ ತಕ್ಕ ಪ್ರತೀಕಾರಕ್ಕೆ ಹಾತೊರೆಯುತ್ತಿದೆ. ಆದ್ರೆ ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ (Ex Pakistan Cricket Player) ಹೇಳಿಕೆ ಭಾರತೀಯರನ್ನು ಮತ್ತಷ್ಟು ಕೆರಳಿಸಿದೆ.

ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಗೆ ಭಾರತವೇ ಕಾರಣ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹೀದ್ ಅಫ್ರೀದಿ (Shahid Affridi) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹೌದು ಪಹಲ್ಗಾಮ್ ದಾಳಿ ವಿಚಾರಕ್ಕೆ ಸಂಬಂಧಿಸದಂತೆ ಮಾತನಾಡಿದ ಅಫ್ರಿದಿ, ಭಾರತವೇ ತನ್ನ ದೇಶದ ನಾಗರಿಕರನ್ನು ಈ ರೀತಿ ಹತ್ಯೆಗೈದು ಈಗ ಪಾಕಿಸ್ತಾನದ ಮೇಲೆ ಆರೋಪ ಮಾಡ್ತಿದೆ. ಪಹಲ್ಗಾಮ್ ದಾಳಿಗೆ ಭಾರತವೇ ಕಾರಣ ಎನ್ನುವ ಮೂಲಕ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.