• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭಾರತ ಯುದ್ಧ ಮಾಡಲು ಸಿದ್ಧ, ಇದನ್ನು ಪ್ರತೀ ಸಂದರ್ಭದಲ್ಲೂ ಭಾರತ ಸಾಭೀತು ಮಾಡಿದೆ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
April 28, 2025
in ಕರ್ನಾಟಕ, ದೇಶ, ವಾಣಿಜ್ಯ, ಶೋಧ
0
ಭಾರತ ಯುದ್ಧ ಮಾಡಲು ಸಿದ್ಧ, ಇದನ್ನು ಪ್ರತೀ ಸಂದರ್ಭದಲ್ಲೂ ಭಾರತ ಸಾಭೀತು ಮಾಡಿದೆ: ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕು: ದೇಶದ ಸಾರ್ವಭೌಮತೆ ಧಕ್ಕೆ ಬಂದಾಗ ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ ಭಾರತ ಯುದ್ಧ ಮಾಡಿಯೇ ಸಿದ್ಧ: ಇದನ್ನು ಪ್ರತೀ ಸಂದರ್ಭದಲ್ಲೂ ಭಾರತ ಸಾಭೀತು ಮಾಡಿದೆ: ಸಿಎಂ ಸಿದ್ದರಾಮಯ್ಯ

ADVERTISEMENT

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಎರಡು ವರ್ಷ ಸರ್ಕಾರದ ಸಾಧನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ.‌ ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಭೀತು ಪಡಿಸಿದೆ. ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು ಸಾರ್ವಭೌಮತೆಯನ್ನು ಕಾಪಾಡಿಕೊಂಡೇ ಬಂದಿದ್ದೇವೆ. ಮುಂದಕ್ಕೂ ಇದನ್ನು ಕಾಪಾಡಿಕೊಳ್ಳುತ್ತೇವೆ ಎಂದರು.

ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆಧ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.

ಭಾರತ ಬುದ್ದ, ಬಸವರ, ಗಾಂಧಿ, ಅಂಬೇಡ್ಕರ್ ಅವರ ನಾಡು. ಇಲ್ಲಿ ಭಯೋತ್ಪಾದನೆಗೆ, ಅಶಾಂತಿಗೆ ಅವಕಾಶ ಇಲ್ಲ. ಅನಿವಾರ್ಯವಾದರೆ ಯುದ್ಧಕ್ಕೂ ಸಿದ್ದ ಎನ್ನುವ ಮಾತನ್ನು ನೆನ್ನೆ ನಾನು ಹೇಳಿದ್ದೆ. ಆದರೆ ಭಯೋತ್ಪಾದಕರ ವಿರುದ್ಧ, ಪಾಕಿಸ್ತಾನದ ವಿರುದ್ಧ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ಸುಳ್ಳು ಸುಳ್ಳೇ ಬಿಜೆಪಿ ಪ್ರಚಾರ ಮಾಡುತ್ತಿದೆ. ಆದರೆ ನನ್ನ ಮಾತನ್ನು ತಿರುಚಿ ಯುದ್ದವೇ ಬೇಡ ಎಂದು ಹೇಳಿದ್ದೇನೆ ಎಂದು ನನ್ನದಲ್ಲದ ಅಭಿಪ್ರಾಯವನ್ನು ತಿರುಚಿ ತೋರಿಸುತ್ತಿದ್ದಾರೆ. ಇದು ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿಯವರೆಗೆ ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕಿದ್ದೇವೆ: ಸಿ.ಎಂ ಸಿದ್ದರಾಮಯ್ಯ

ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರ ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ, ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳೆಗೆ ಅಭಿವೃದ್ಧಿ ಮೂಲಕವೇ ಉತ್ತರ: ಸಿ.ಎಂ


ಇಲ್ಲಿಯವರೆಗೆ ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಗ್ರಾಮಾಂತರ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರ ಸಾವಿರ ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳೆಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ ಎಂದರು.

ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾಣುತ್ತದೆ ಎಂದು ಟೀಕಿಸಿದರು.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸುತ್ತಲೇ ಇದ್ದೇವೆ. ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್ ನಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡಿ ಇದಕ್ಕಾಗಿ 80 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದ್ದೇವೆ ಎಂದರು.‌

Tags: bengalurubengaluru municipal corporationD K ShivakumarDCM DK ShivakumarDK Shivakumardk shivakumar latest newsdk shivakumar meeting on greater bengalurudk shivakumar newsdk shivakumar on greater bangaloredk shivakumar on greater bengalurudk shivakumar speechgreater bangalore billgreater bangalore projectgreater bengalurugreater bengaluru billgreater bengaluru bill passedgreater bengaluru governance
Previous Post

ಟಿಸಿಎಸ್ 10ಕೆ ಓಟ, ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡಲು ಸಹಕಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

Next Post

‘ಟಕೀಲಾ’ ಡ್ರಗ್ಸ್ ಸುಳಿಯಲ್ಲಿ ನಲುಗಿದವರು..

Related Posts

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..
Top Story

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

by ಪ್ರತಿಧ್ವನಿ
May 1, 2026
0

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು...

Read moreDetails
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
Next Post
‘ಟಕೀಲಾ’ ಡ್ರಗ್ಸ್ ಸುಳಿಯಲ್ಲಿ ನಲುಗಿದವರು..

'ಟಕೀಲಾ' ಡ್ರಗ್ಸ್ ಸುಳಿಯಲ್ಲಿ ನಲುಗಿದವರು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada