ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2858 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ನಿನ್ನೆಗೆ ಹೋಲಿಸಿದರೆ ಶೇ. 0.6ರಷ್ಟು ಏರಿಕೆ ಕಂಡು ಬಂದಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,31,19,112ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಒಂದು ದಿನದಲ್ಲಿ 11 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಟ್ಟಾರೆ ಸೋಂಕಿಗೆ ಬಲಿಯಾದವರ ಸಂಖ್ಯೆ 5,24,201ಕ್ಕೆ ಜಿಗಿತ ಕಂಡಿದೆ.
5 ರಾಜ್ಯಗಳಲ್ಲಿ ಸೋಂಕು ಪ್ರಮಾಣ ಹೆಚ್ಚಾಗಿದ್ದು, ದೆಹಲಿಯಲ್ಲಿ ಒಂದೇ ದಿನ 899 ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಒಂದು ದಿನದಲ್ಲಿ 3355 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,25,76,815ಕ್ಕೆ ಜಿಗಿತ ಕಂಡಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ 18,096ಕ್ಕೆ ಇಳಿದಿದೆ.