ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,545 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 4,30,94,938ಕ್ಕೆ ಏರಿಕೆಯಾಗಿದೆ. ದೇಶವು 27 ಕೋವಿಡ್ಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 5,24,002 ಕ್ಕೆ ಏರಿಕೆಯಾಗಿದೆ.
ಆರೋಗ್ಯ ಸಚಿವಾಲಯದ ಪ್ರಕಾರ, ದೈನಂದಿನ ಪಾಸಿಟಿವಿಟಿ ರೇಟ್ ಶೇಕಡಾ 1.07 ರಷ್ಟಿದ್ದರೆ, ವಾರಕ್ಕೆ ಪಾಸಿಟಿವಿಟಿ ರೇಟ್ ಶೇಕಡಾ 0.70 ರಷ್ಟಿದೆ.
3,500 ಕ್ಕೂ ಹೆಚ್ಚು ಜನರು ಕರೋನವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ, ದೇಶದಲ್ಲಿ ಒಟ್ಟು ಕೋವಿಡ್ನಿಂದ ಚೇತರಿಕೆಗೊಂಢವರೆ ಸಂಖ್ಯೆ 4,25,51,248 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಕರೋನ ಪಾಸಿಟಿವ್ ಪ್ರಕರಣಗಳು ಹಾವು ಏಣಿಯಾಟ ಆಡುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 191 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,48,283ಕ್ಕೆ ಏರಿಕೆಯಾಗಿದೆ.
ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40060 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.







