ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮೂಂಚೂಣಿಯಲ್ಲಿರುವ ಭಾರತ ಲಸಿಕಾ ಅಭಿಯಾನದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ದೇಶದ ಶೇ.60% ರಷ್ಟು ಜನಸಂಖ್ಯೆಯು ಎರಡು ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಟ್ವೀಟ್ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಮನ್‌ಸುಖ್ ಮಾಂಡವೀಯಾ ಈ ಮೈಲಿಗಲ್ಲನ್ನು ಕ್ರಮಿಸಲು ಸಾಧ್ಯವಾಗಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಾಧನೆಯೊಂದಿಗೆ ಇನ್ನಷ್ಟು ಸಾಧನೆಗಳನ್ನು ಸಾಧಿಸುತ್ತೇವೆ ಎಂದು ಹೇಳಿದ್ದಾರೆ. ಅಭಿನಂದನೆಗಳು ಭಾರತ, ನಮ್ಮ ಆರೋಗ್ಯ ಇಲಾಖೆಯ ಕಾರ್ಯಕರ್ತರು, ವೈದ್ಯರು, ಲಸಿಕೆ ಅಭಿಯಾನದಲ್ಲಿ ಸಾರ್ವಜನಿಕರ ಭಾಗುವಹಿಸುವಿಕೆ ಮತ್ತು ಎಲ್ಲರ ಒಗ್ಗಟ್ಟಿನ ಪ್ರಯತ್ನದ ಫಲವಾಗಿ ದೇಶದ ಶೇ.60%ಕ್ಕಿಂತ ಹೆಚ್ಚಿನ ಜನಸಂಖ್ಯೆಯು ಎರಡು ಡೋಸ್ ಲಸಿಕೆಯನ್ನ ಪಡೆದಿದ್ದಾರೆ ಎಂದು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಾರ ಡಿಸೆಂಬರ್ 23ರ ಬೆಳ್ಳಗ್ಗೆ 8ರ ಸುಮಾರಿಗೆ ದೇಶದ 139.70 ಕೋಟಿ ಜನರು ಎರಡು ಡೋಸ್ ಲಸಿಕೆಯನ್ನ ಪಡೆದಿದ್ದಾರೆ. ಈ ಪೈಕಿ 70.17 ಲಕ್ಷ ಡೋಸ್‌ಗಳನ್ನು ಕಳೆದ 24 ಘಂಟೆಗಳಲ್ಲಿ ನೀಡಲಾಗಿದೆ.