• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಧಿಕಾರದ ಕನಸು ಕಾಣುತ್ತಿರುವ ಇಂಡಿಯಾ ಮೈತ್ರಿ! ಎನ್ ಡಿಎ ಸ್ನೇಹಿತರಿಗೆ ಆಫರ್ ಗಳ ಸುರಿಮಳೆ

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in ದೇಶ, ರಾಜಕೀಯ
0
ಕಿಂಗ್ ಮೇಕರ್ ಆದ್ರಾ ನಿತೀಶ್ ಮತ್ತು ಚಂದ್ರಬಾಬು ನಾಯ್ಡು ?! NDA ಭವಿಷ್ಯ ಅತಂತ್ರ ?! 
Share on WhatsAppShare on FacebookShare on Telegram

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಗೆ ಢವ ಢವ ಶುರುವಾಗಿದೆ. ಬಿಜೆಪಿಗೆ ಮತದಾರ ಬಿಸಿ ಮುಟ್ಟಿಸಿದ್ದು, ಮೈತ್ರಿ ಪಕ್ಷಗಳ ಬೆಂಬಲ ಅವಶ್ಯವಾಗಿದೆ. ಈ ಮಧ್ಯೆ ಇಂಡಿಯಾ ಮೈತ್ರಿ ಎನ್ ಡಿಎ ಮೈತ್ರಿಕೂಟದ ಪಕ್ಷಗಳಿಗೆ ಆಫರ್ ನೀಡುತ್ತಿದೆ.

ADVERTISEMENT

400ರ ಗಡಿ ದಾಟುವ ಕನಸು ಹೊತ್ತು ಚುನಾವಣಾ ಅಖಾಡಕ್ಕೆ ಧುಮುಕಿದ್ದ ಬಿಜೆಪಿ ಈ ಬಾರಿ ನಿರೀಕ್ಷೆಗಿಂತಲೂ ಕಡಿಮೆ ಗೆದ್ದಿದೆ. ಹೀಗಾಗಿ ಬಿಜೆಪಿಗೆ ಮಿತ್ರ ಪಕ್ಷಗಳ ವಿಶ್ವಾಸ ಅನಿವಾರ್ಯವಾಗಿದೆ. ಇನ್ನೊಂದೆಡೆ ಅವಕಾಶ ಸಿಕ್ಕರೆ ಬಿಡೋದು ಬೇಡ ಎಂದು ಇಂಡಿಯಾ ಒಕ್ಕೂಟ ಕೂಡ ಅಧಿಕಾರ ರಚಿಸಲು ಮುಂದಾಗಿದೆ.

ಹೀಗಾಗಿಯೇ ಬಿಜೆಪಿಯ ಮಿತ್ರ ಪಕ್ಷಗಳನ್ನು ಸೆಳೆಯಲು ಇಂಡಿಯಾ ಮೈತ್ರಿಯ ನಾಯಕರು ಆರಂಭಿಸಿದ್ದಾರೆ. ಎನ್ ಡಿಎ ಮೈತ್ರಿಯ ಕಿಂಗ್ ಮೇಕರ್ ಗಳನ್ನು ಆಕರ್ಷಿಸಲು ದೊಡ್ಡ ದೊಡ್ಡ ಆಫರ್ ನೀಡಲಾಗುತ್ತಿದೆ. ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಹಾಗೂ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅವರನ್ನು ಟಾರ್ಗೆಟ್‌ ಮಾಡಲಾಗಿದೆ.

ಈ ನಾಯಕರೇ ಈಗ ಬಿಜೆಪಿಗೆ ಆಧಾರ. ಹೀಗಾಗಿಯೇ ಇವರಿಗಾಗಿ ಇಂಡಿಯಾ ಮೈತ್ರಿ ಗಾಳ ಹಾಕಿದೆ. ಇವರಿಬ್ಬರು ಕೂಡ ಮೋದಿ ಅವರಿಂದ ಮೊದಲಿನಿಂದಲೂ ಅಂತರ ಕಾಯ್ದುಕೊಂಡಿದ್ದರು. ಚುನಾವಣೆಗೆ ಕೆಲವೇ ದಿನಗಳ ಮುನ್ನ ಈ ನಾಯಕರು ಬಿಜೆಪಿ ಜೊತೆ ಕೈ ಜೋಡಿಸಿದ್ದರು. ಹೀಗಾಗಿ ಇಬ್ಬರನ್ನೂ ಸೆಳೆಯುವುದು ಸುಲಭ ಎಂಬ ಕಾರಣಕ್ಕೆ ಇಂಡಿಯಾ ಮೈತ್ರಿಕೂಟ ಪ್ರಯತ್ನ ನಡೆಸುತ್ತಿದೆ.

ಬಿಹಾರ ಸಿಎಂ ನಿತೀಶ್‌ ಕುಮಾರ್‌ಗೆ ಉಪ ಪ್ರಧಾನ ಮಂತ್ರಿಯ ಆಫರ್‌ ಅನ್ನು ಇಂಡಿಯಾ ನಾಯಕರು ನೀಡಿದ್ದಾರೆ. ಇದರ ಜೊತೆ ಆಂಧ್ರದ ಮುಂದಿನ ಸಿಎಂ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ತಮ್ಮ ಕಡೆ ಸೆಳೆಯಲು ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಶರದ್‌ ಪವಾರ್‌ ಅವರನ್ನು ಮುಂದಿಟ್ಟುಕೊಂಡು ಈ ಪ್ರಯತ್ನ ನಡೆಸಲಾಗುತ್ತಿದೆ. ಇಂಡಿಯಾ ಮೈತ್ರಿಕೂಟ ಪ್ರಾರಂಭವಾದಾಗ ನಿತೀಶ್‌ ಕುಮಾರ್‌ ಅವರು ಪ್ರಮುಖ ಪಾತ್ರ ವಹಿಸಿದ್ದರು. ಇದರೊಂದಿಗೆ ತಟಸ್ಥ ಸಂಸದರನ್ನು ಸೆಳೆಯಲು ಇಂಡಿಯಾ ಮೈತ್ರಿ ಮುಂದಾಗಿದೆ. ಆದರೆ, ಎನ್ ಡಿಎ ಮೈತ್ರಿಕೂಟ ಛಿದ್ರವಾಗಿ ಮೋದಿ ಹ್ಯಾಟ್ರಿಕ್ ಪ್ರಧಾನಿಯಾಗುವ ಕನಸು ಕನಸಾಗಿಯೇ ಉಳಿಯಲಿದೆಯೇ? ಅಥವಾ ಎನ್ ಡಿಎ ಒಗ್ಗಟ್ಟಾಗಿ ಇರಲಿದೆಯೇ? ಕಾಯ್ದು ನೋಡಬೇಕಿದೆ.

Tags: BJPElectionNDA
Previous Post

ಮೋದಿ ಪೋನ್‌ ಯಾರು ತೆಗಿತಿಲ್ಲ ವಿಡಿಯೋ ವೈರಲ್‌..!

Next Post

ವಿಶ್ವೇಶ್ವರ ಹೆಗ್ಡೆ ಕಾಗೆರಿ ಅನಂತ ಕುಮಾರ್ ಹೆಗ್ಡೆ ನಡುವೆ ಬಿಗ್ ಫೈಟ್..!

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post

ವಿಶ್ವೇಶ್ವರ ಹೆಗ್ಡೆ ಕಾಗೆರಿ ಅನಂತ ಕುಮಾರ್ ಹೆಗ್ಡೆ ನಡುವೆ ಬಿಗ್ ಫೈಟ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada