ಬೆಂಗಳೂರು: ವಿಶ್ವದ ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯ ಹೈವೋಲ್ಟೇಜ್ ಪಂದ್ಯವಾದ ಭಾರತ- ಪಾಕಿಸ್ತಾನ ಕದನಕ್ಕೆ ಕ್ಷಣಗಣನೆ ಶುರುವಾಗಿದೆ. ಒಡಿಐ ವಿಶ್ವಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಅಗ್ರ ಐವರು ಭಾರತದ ಬ್ಯಾಟ್ಸ್‌ಮನ್‌ಗಳ ಬಗ್ಗೆ ಇಲ್ಲಿ ವಿವರಿಸಲಾಗಿದೆ.
2023ನೇ ಸಾಲಿನ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ತಾವಾಡಿರುವ 2 ಪಂದ್ಯಗಳಲ್ಲೂ ಗೆಲುವು ಸಾಧಿಸಿ ಉತ್ತಮ ಲಯದಲ್ಲಿವೆ. ಆಸ್ಟ್ರೇಲಿಯಾ ಹಾಗೂ ಅಪಘಾನಿಸ್ತಾನ ವಿರುದ್ಧ ಭಾರತ ಗೆಲುವು ಸಾಧಿಸಿದ್ದರೆ, ಪಾಕಿಸ್ತಾನ ತಂಡವು ನೆದರ್ಲೆಂಡ್ಸ್ ಹಾಗೂ ಶ್ರೀಲಂಕಾ ತಂಡಗಳನ್ನು ಮಣಿಸಿವೆ. ಇಂದು (ಶನಿವಾರ) ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯ ಗೆದ್ದು ಹ್ಯಾಟ್ರಿಕ್ ಗೆಲುವು ಸಾಧಿಸಲು ಎರಡೂ ತಂಡಗಳು ಎದುರು ನೋಡುತ್ತಿವೆ.
ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 1992ರಲ್ಲಿ ಮೊದಲ ಬಾರಿ ಇಂಡೋ- ಪಾಕ್ ಕದನ ನಡೆದಿದ್ದು, ಅಂದಿನಿಂದ ಇಲ್ಲಿಯವರೆಗೂ ಭಾರತ ತಂಡ 7-0 ಅಂತರದಲ್ಲಿ ಮೇಲುಗೈ ಸಾಧಿಸಿದೆ. ಈ ದೊಡ್ಡ ಟೂರ್ನಿಯಲ್ಲಿ ಭಾರತ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಅಗ್ರ ಐವರು ಬ್ಯಾಟ್ಸ್‌ಮನ್‌ಗಳನ್ನು ವಿವರ ಇಲ್ಲಿದೆ.