ಕರೋನ 4ನೇ ಅಲೆ ಆತಂಕದ ನಡುವೆ ಅದಕ್ಕೆ ಪುಷ್ಟಿ ನೀಡುವ ರೀತಿಯಲ್ಲಿ ದೇಶಾದ್ಯಂತ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
ಹೌದು, ಕಳೆದ 24 ಗಂಟೆಯಲ್ಲಿ 2,252 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 32 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 523654 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 16279 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2252 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.