ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,103 ಮಂದಿ ಕರೋನಾ ಸೋಂಕು ತಗುಲಿರುವುದು ದೃಢವಾಗಿದೆ.
ಹೌದು, ದೇಶದಲ್ಲಿ ಹಿಂದಿನ ದಿನಕ್ಕೆ ಹೋಲಿಸಿದರೆ ಸಾವಿರಕ್ಕೂ ಕಡಿಮೆ ಪ್ರಕರಣಗಳು ಪತ್ತೆಯಾದಂತಾಗಿದ್ದು, ಸಾವಿನ ಸಂಖ್ಯೆಯಲ್ಲಿ ಎಚ್ಚಳವಾಗಿದೆ.
ದೆಶದಲ್ಲಿ 31 ಹೊಸ ಸಾವುಗಳೊಂದಿಗೆ ಸಾವಿನ ಸಂಖ್ಯೆ 5,25,199 ಕ್ಕೆ ಏರಿದೆ ಎಂದು ಸಚಿವಾಲಯ ಬಿಡುಗಡೆ ಮಾಡಿದ ಡೇಟಾ ತಿಳಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ 2,143 ಪ್ರಕರಣಗಳು ಹೆಚ್ಚಳ ದಾಖಲಾಗಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,28,65,519 ಕ್ಕೆ ಏರಿದೆ.

ಕರ್ನಾಟಕದಲ್ಲಿ ಶನಿವಾರ 975 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. 668 ಮಂದಿ ಗುಣಮುಖರಾಗಿದ್ದಾರೆ.











