ದೇಶದಲ್ಲಿ ಇಂದು ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 4,270 ಮಂದಿಗೆ ಹೊಸದಾಗಿ ಸೋಂಕು ಪತ್ತೆಯಾಗಿದೆ. 15 ಮಂದಿ ಮಹಾಮಾರಿಗೆ ಮೃತಪಟ್ಟಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,270 ಹೊಸ ಪ್ರಕರಣಗಳು, 2,619 ಚೇತರಿಕೆಗಳು ಮತ್ತು 15 ಸಾವುಗಳು ವರದಿಯಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 24,052 ಇದೆ. ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ ಒಟ್ಟು 524692 ಕ್ಕೆ ಏರಿಕೆಯಾಗಿದೆ.