ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 16,047 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 54 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,41,90,697ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 5,26,826ಕ್ಕೆ ಜಿಗಿತ ಕಂಡಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,28,261ಕ್ಕೆ ಇಳಿಕೆಯಾಗಿದ್ದು, ದೈನಂದಿನ ಪಾಸಿಟಿವಿಟ ದರ 4.94 ರಷ್ಟಿದೆ, ಮರಣ ಪ್ರಮಾಣ ಶೇ.1.19ರಷ್ಟಿದೆ.