ಉಚ್ಚಾಟಿತ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ನಡುವೆ ಪಾಕ್ ಹೇಳಿಕೆಗೆ ಭಾರತ ತಿರುಗೇಟು ನೀಡಿದೆ.
ಅಲ್ಪಸಂಖ್ಯಾತರ ಹಕ್ಕುಗಳನ್ನು ಉಲ್ಲಂಘಿಸಿ ಬೇರೆ ರಾಷ್ಟ್ರವನ್ನ ಟೀಕಿಸುವವರು ಅವಿವೇಕದ ಪರಮಾವಧಿ ಎಂದು ವಿದೇಶಾಂಗ ಇಲಾಖೆ ಟ್ವೀಟ್ ಮಾಡಿ ತಿರುಗೇಟು ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ವಿ ನಿರಂತರವಾಗಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಉಲ್ಲಂಘಿಸುತ್ತಿರುವವರು ಮತ್ತೊಂದು ರಾಷ್ಟ್ರವು ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳುತ್ತಿರುವ ಬಗ್ಗೆ ಮಾತನಾಡುತ್ತಿರುವುದು ಅಸಂಬದ್ದವಾಗಿದೆ.
ಮುಂದುವರೆದು, ಪಾಕಿಸ್ತಾನದಲ್ಲಿ ಹಿಂದೂ, ಸಿಖ್ಖರು, ಕ್ರಶ್ಚಿಯನ್ನರು ಹಾಗು ಅಹಮದೀಯರು ಸೇರಿದಂತೆ ಅಲ್ಪಸಂಖ್ಯಾತರು ನಿರಂತರವಾಗಿ ಕಿರುಕುಳವನ್ನ ಎದುರಿಸುತ್ತಿರುವ ವಿಚಾರಕ್ಕೆ ಇಡೀ ಜಗತ್ತೇ ಸಾಕ್ಷಿಯಾಗಿದೆ ಎಂದು ತಿರುಗೇಟು ನೀಡಿದ್ದಾರೆ.






