ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟಿಸಲಾಗಿದ್ದು, ಹಿರಿಯ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಗೆ ನಾಯಕತ್ವ ವಹಿಸಲಾಗಿದೆ.
ಬಿಸಿಸಿಐ ಆಯ್ಕೆ ಸಮಿತಿ ಬುಧವಾರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಹಿರಿಯ ಆಟಗಾರರಾದ ಜಸ್ ಪ್ರೀತ್ ಬುಮ್ರಾ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಜುಲೈ 22ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭಗೊಳ್ಳಲಿದ್ದು, ಇದಕ್ಕಾಗಿ 16 ಸದಸ್ಯರ ತಂಡ ಪ್ರಕಟಿಸಲಾಗಿದೆ. ಶಿಖರ್ ಧವನ್ ಇದೇ ಮೊದಲ ಬಾರಿಗೆ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಪಡೆದರೆ, ಆಲ್ ರೌಂಡರ್ ರವೀಂದ್ರ ಜಡೇಜಾಗೆ ಉಪನಾಯಕನ ಪಟ್ಟ ನೀಡಲಾಗಿದೆ.
ಯುವ ಆಟಗಾರರಾದ ದೀಪಕ್ ಹೂಡಾ, ಅರ್ಷದೀಪ್ ಸಿಂಗ್, ಆವಿಶ್ ಖಾನ್, ಪ್ರಸಿದ್ಧ ಕೃಷ್ಣ ಅವರಿಗೆ ಅವಕಾಶ ನೀಡಲಾಗಿದೆ. ವಿಕೆಟ್ ಕೀಪರ್ ರಿಷಭ್ ಪಂತ್ ಗೂ ವಿಶ್ರಾಂತಿ ನೀಡಲಾಗಿದ್ದು, ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಇಬ್ಬರು ವಿಕೆಟ್ ಕೀಪರ್ ನೇಮಕ ಮಾಡಲಾಗಿದೆ.
ಭಾರತ ತಂಡ
ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯಜುರ್ವೆಂದ್ರ ಚಾಹಲ್, ಅಕ್ಸರ್ ಪಟೇಲ್, ಆವಿಶ್ ಖಾನ್, ಪ್ರಸಿದ್ಧ ಕೃಷ್ಣ, ಮೊಹಮದ್ ಸಿರಾಜ್, ಅರ್ಷದೀಪ್ ಸಿಂಗ್.