• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಇಂದಿನಿಂದ ಮೊದಲ ಟೆಸ್ಟ್‌: ಆಂಗ್ಲರ ʻಬಾಜ್‌ಬಾಲ್‌ʼ ಚಾಲೆಂಜ್‌ ಎದುರಿಸಲು ಭಾರತ ಸಜ್ಜು

Any Mind by Any Mind
January 25, 2024
in ಕ್ರೀಡೆ, ವಿದೇಶ
0
ಇಂದಿನಿಂದ ಮೊದಲ ಟೆಸ್ಟ್‌: ಆಂಗ್ಲರ ʻಬಾಜ್‌ಬಾಲ್‌ʼ ಚಾಲೆಂಜ್‌ ಎದುರಿಸಲು ಭಾರತ ಸಜ್ಜು
Share on WhatsAppShare on FacebookShare on Telegram

ಭಾರತ(Team India) ಹಾಗೂ ಇಂಗ್ಲೆಂಡ್‌(England) ನಡುವಿನ ಐದು ಪಂದ್ಯಗಳ ಟೆಸ್ಟ್‌ ಸರಣಿಯ(Test Series) ಮೊದಲ ಟೆಸ್ಟ್‌ ಇಂದಿನಿಂದ ಆರಂಭವಾಗಲಿದ್ದು, ಹೈದರಾಬಾದ್‌ನ(Hyderabad) ರಾಜೀವ್‌ ಗಾಂಧಿ(Rajiv Gandhi) ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಕ್ಕಾಗಿ ಉಭಯ ತಂಡಗಳು ಭರ್ಜರಿ ತಯಾರಿ ಮಾಡಿಕೊಂಡಿವೆ.

ADVERTISEMENT

ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್ಷಿಪ್‌ ಹಿನ್ನೆಲೆಯಲ್ಲಿ ಎರಡು ತಂಡಗಳ ನಡುವಿನ ಈ ಸರಣಿ ಅತ್ಯಂತ ಮಹತ್ವ ಪಡೆದಿದ್ದು, ಇತ್ತೀಚಿಗೆ ‘ಬಾಜ್‌ಬಾಲ್’ ಮೂಲಕ ಭಾರೀ ಸದ್ದು ಮಾಡುತ್ತಿರುವ ಆಂಗ್ಲರು ಭಾರತದ ಸ್ಪಿನ್‌ ಸ್ನೇಹಿ ಪಿಚ್‌ಗಳಲ್ಲಿ ಯಾವ ರೀತಿ ಅಬ್ಬರಿಸುತ್ತಾರೆ ಎಂಬ ಕುತೂಹಲ ವಿಶ್ವ ಕ್ರಿಕೆಟ್‌ನ ಗಮನ ಸೆಳೆದಿದೆ. ಮತ್ತೊಂದೆಡೆ ಟೀಮ್‌ ಇಂಡಿಯಾ ಆಟಗಾರರು ಇಂಗ್ಲೆಂಡ್‌ ತಂಡದ ಸವಾಲನ್ನು ಎದುರಿಸಲು ಯಾವ ತಂತ್ರಗಾರಿಕೆ ರೂಪಿಸಿಕೊಂಡು ಕಣಕ್ಕಿಳಿಯಲಿದೆ ಎಂಬ ಕುತೂಹಲ ಹೆಚ್ಚಿಸಿದೆ.

ಇತ್ತೀಚೆಗೆ ನಡೆದ ಸೌತ್‌ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದ ಯಶಸ್ಸು ಹಾಗೂ ತವರಿನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧ ಟಿ20 ಸರಣಿಯಲ್ಲಿ ಕ್ಲೀನ್‌ ಸ್ವೀಪ್‌ ಮಾಡಿದ ಆತ್ಮವಿಶ್ವಾಸದೊಂದಿಗೆ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಭಾರತ ಕಣಕ್ಕಿಳಿಯುತ್ತಿದ್ದರೆ. ಪ್ರವಾಸಿ ಇಂಗ್ಲೆಂಡ್‌ ಬರೋಬ್ಬರಿ ಆರು ತಿಂಗಳ ನಂತರದಲ್ಲಿ ಟೆಸ್ಟ್‌ ಪಂದ್ಯವನ್ನಾಡುತ್ತಿದೆ. ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧದ ಆಶಸ್‌ ಟೆಸ್ಟ್‌ ಸರಣಿ ಆಡಿದ್ದ ಇಂಗ್ಲೆಂಡ್‌ 2-2ರಿಂದ ಸಮಬಲ ಸಾಧಿಸಿತ್ತು.

ತವರಿನಲ್ಲಿ ಭಾರತದ ಪ್ರಾಬಲ್ಯ: ತವರಿನಲ್ಲಿ ಟೆಸ್ಟ್‌ ಸರಣಿಯಲ್ಲಿ ಪ್ರಾಬಲ್ಯ ಹೊಂದಿರುವ ಭಾರತ, ಇದೇ ಆತ್ಮವಿಶ್ವಾಸದಲ್ಲಿ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿ ಆಡುತ್ತಿದೆ. ಈ ಹಿಂದೆ 2012ರಲ್ಲಿ ಅಲಿಸ್ಟರ್‌ ಕುಕ್‌ ನಾಯಕತ್ವದಲ್ಲಿ ಭಾರತದ  ವಿರುದ್ಧ ಟೆಸ್ಟ್‌ ಸರಣಿ ಆಡಿದ್ದ ಇಂಗ್ಲೆಂಡ್‌, ಟೆಸ್ಟ್‌ ಸರಣಿ ಗೆದ್ದಿತ್ತು. ಆದರೆ ನಂತರದ ವರ್ಷದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಭಾರತ ಪ್ರಾಬಲ್ಯ ಸಾಧಿಸಿತ್ತು. 2016ರಲ್ಲಿ 4-0 ಅಂತರದಲ್ಲಿ ಟೆಸ್ಟ್‌ ಸರಣಿ ಗೆದ್ದಿದ್ದ ಟೀಮ್‌ ಇಂಡಿಯಾ, 2021ರಲ್ಲಿ 3-1ರ ಅಂತರದಿಂದ ಆಂಗ್ಲರನ್ನು ಮಣಿಸಿ ಟೆಸ್ಟ್‌ ಸರಣಿ ಗೆದ್ದು ಬೀಗಿತ್ತು. ಆದರೆ ಪ್ರಸ್ತುತ ಬೆನ್‌ ಸ್ಟೋಕ್ಸ್‌ ನಾಯಕತ್ವ ಹಾಗೂ ಬ್ರೆಂಡನ್‌ ಮೆಕ್ಕಲಂ ಮಾರ್ಗದರ್ಶನದಲ್ಲಿ ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್‌, ಬಲಿಷ್ಠ ತಂಡವಾಗಿ ಹೊಸ ಹುರುಪಿನೊಂದಿಗೆ ಟೆಸ್ಟ್‌ ಸರಣಿಯಲ್ಲಿ ಆಡಲು ಸಜ್ಜಾಗಿದೆ.

ಪ್ರಮುಖ ಆಟಗಾರರ ಅನುಪಸ್ಥಿತಿ: ಮೊದಲ ಟೆಸ್ಟ್‌ ಪಂದ್ಯಕ್ಕೆ ಸಜ್ಜಾಗಿರುವ ಉಭಯ ತಂಡಗಳಿಗೆ ಪ್ರಮುಖ ಬ್ಯಾಟರ್‌ಗಳ ಅನುಪಸ್ಥಿತಿ ಕಾಡಲಿದೆ. ಭಾರತದ ಪರ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಮೊದಲೆರಡು ಟೆಸ್ಟ್‌ ಪಂದ್ಯಗಳಿಂದ ಹೊರಗುಳಿದಿದ್ದರೆ. ಇಂಗ್ಲೆಂಡ್‌ ಪರವಾಗಿ ಮಧ್ಯಮ ಕ್ರಮಾಂಕದ ಬ್ಯಾಟರ್‌ ಹ್ಯಾರಿ ಬ್ರೂಕ್‌ ಕೂಡ ಸರಣಿಯ ಕೆಲವು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಹೀಗಾಗಿ ವಿರಾಟ್‌ ಕೊಹ್ಲಿ ಅವರ ಬದಲಿಗೆ ಯಾರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಭಾರತ(ಸಂಭಾವ್ಯ ತಂಡ):
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಕೆ.ಎಸ್. ಭರತ್ (ವಿಕೆ), ಆರ್ ಅಶ್ವಿನ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್‌: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್, ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲೆ, ಮಾರ್ಕ್ ವುಡ್, ಜ್ಯಾಕ್ ಲೀಚ್.

ಇಂಗ್ಲೆಂಡ್‌ ವಿರುದ್ಧದ ಆರಂಭಿಕ ಎರಡು ಟೆಸ್ಟ್‌: ವಿರಾಟ್‌ ಕೊಹ್ಲಿ ಜಾಗಕ್ಕೆ ರಜತ್‌ ಪತಿದಾರ್‌ ಆಯ್ಕೆ
Previous Post

ಕೈ ಕೊಟ್ಟ ಸ್ವಿಚ್ಚು, ಸಿಎಂಗೆ ತರಿಸಿತು ಸಿಟ್ಟು: ಚೆಸ್ಕಾಂ ಎಂಡಿ ಕಿಕ್ ಔಟು

Next Post

ಇಂದು ಕೊಡಗು ಜಿಲ್ಲೆಗೆ ಸಿಎಂ ಭೇಟಿ: ಮೊಟ್ಟೆ ಎಸೆದ ಘಟನೆ ಬಳಿಕ ಮೊದಲ ಬಾರಿಗೆ ಬರುತ್ತಿರುವ ಸಿದ್ದರಾಮಯ್ಯ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
Next Post
ನಿಗಮ ಮಂಡಳಿ ನೇಮಕ : ಎಲ್ಲರ ಅಭಿಪ್ರಾಯ ಪಡೆಯಲು ಕಷ್ಟ ಎಂದ ಸಿದ್ದರಾಮಯ್ಯ

ಇಂದು ಕೊಡಗು ಜಿಲ್ಲೆಗೆ ಸಿಎಂ ಭೇಟಿ: ಮೊಟ್ಟೆ ಎಸೆದ ಘಟನೆ ಬಳಿಕ ಮೊದಲ ಬಾರಿಗೆ ಬರುತ್ತಿರುವ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada