ನಾಲ್ಕನೇ ಟಿ-20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದಲ್ಲಿ 3 ಬದಲಾವಣೆ ಮಾಡಲಾಗಿದ್ದರೆ, ಸರಣಿ ಜೀವಂತ ಉಳಿಸಿಕೊಳ್ಳಬೇಕಾದರೆ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ರಾಜ್ ಕೋಟ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ರನ್ ಚೇಸ್ ಮಾಡಿ ಸರಣಿ ವಶಪಡಿಸಿಕೊಳ್ಳುವ ಗುರಿ ಹೊಂದಿದೆ.
ದಕ್ಷಿಣ ಆಫ್ರಿಕಾ ತಂಡದಲ್ಲಿ ಕಗಿಸೊ ರಬಡಾ, ವೇಯ್ನ್ ಪಾರ್ನೆಲ್, ರೀಜಾ ಹೊರಗುಳಿದರೆ, ಜಾನ್ಸನ್, ಕ್ವಿಂಟನ್ ಡಿ ಕಾಕ್ ಮತ್ತು ಲುಂಗಿ ಎನ್‌ಗಿಡಿ ಮರಳಿದ್ದಾರೆ.