• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, November 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

300ಕ್ಕೂ ಹೆಚ್ಚು ಸ್ಥಾನ ಗೆದ್ದು ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
May 16, 2024
in ದೇಶ
0
300ಕ್ಕೂ ಹೆಚ್ಚು ಸ್ಥಾನ ಗೆದ್ದು ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ಲಖನೌ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ADVERTISEMENT

ಲಖನೌದಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ರಾಹುಲ್ ಗಾಂಧಿ ಅವರು ದೇಶಾದ್ಯಂತ ಭಾರತ ಜೋಡೋ ಯಾತ್ರೆ ಮೂಲಕ ನಿರುದ್ಯೋಗ ಹಾಗೂ ಬೆಲೆ ಏರಿಕೆ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂಬುವುದನ್ನು ಅರಿತರು. ಈ ಸಮಸ್ಯೆಗಳಿಂದ ತತ್ತರಿಸಿರುವ ರಾಜ್ಯದ ಜನರಿಗೆ ನೆರವಾಗಬೇಕು ಎಂದು ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೇವು ಎಂದು ಹೇಳಿದ್ದಾರೆ.

ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡುತ್ತಿದ್ದೇವೆ. ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಿಸಿದೆವು. ಅನ್ನಭಾಗ್ಯ ಯೋಜನೆ ಮೂಲಕ ಪ್ರತಿ ಬಡ ಕುಟುಂಬಗಳಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡುತ್ತಿದ್ದೇವೆ. ನಿರುದ್ಯೋಗಿ ಯುವಕರಿಗೆ ಯುವನಿಧಿ ಯೋಜನೆ ಘೋಷಿಸಿದೇವು.

ಕರ್ನಾಟಕದಲ್ಲಿ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಮೂಲಕ 2 ಸಾವಿರ ಹಣ ಪಡೆಯುತ್ತಿದ್ದಾರೆ. 1.50 ಕೋಟಿ ಮನೆಗಳಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನಲ್ಲಿ ಇಂಡಿಯಾ ಮೈತ್ರಿಕೂಟ ರಚನೆಯಾಯಿತು. ತೆಲಂಗಾಣ ಚುನಾವಣೆದಲ್ಲೂ 6 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು, ಆ ಪೈಕಿ ಬಹುತೇಕ ಜಾರಿಯಾಗಿವೆ. ಕೆಲವು ಜಾರಿ ಪ್ರಕ್ರಿಯೆಯಲ್ಲಿವೆ.

ಬಿಜೆಪಿ 10 ವರ್ಷಗಳ ಹಿಂದೆ ಕಪ್ಪು ಹಣ ತಂದು ಜನರ ಖಾತೆಗೆ 15 ಲಕ್ಷ ಹಾಕುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಹೇಳಿತ್ತು. ಆದರೆ ಅವರು ಕೊಟ್ಟ ಭರವಸೆಗಳನ್ನು ಈಡೇರಿಸಲಿಲ್ಲ. ಕರ್ನಾಟಕದಲ್ಲಿ 6.5 ಕೋಟಿ ಜನಸಂಖ್ಯೆ ಇದ್ದು, ನಮ್ಮ ರಾಜ್ಯದ ಬಜೆಟ್ ಗಾತ್ರ 3.80 ಲಕ್ಷ ಕೋಟಿ ಇದೆ. ಆ ಪೈಕಿ 52 ಸಾವಿರ ಕೋಟಿ ರೂ. ಅನುದಾನವನ್ನು ಗ್ಯಾರಂಟಿ ಯೋಜನೆಗಳ ಜಾರಿಗೆ ಮೀಸಲಿಟ್ಟಿದ್ದೇವೆ. ಇನ್ನು 1.20 ಲಕ್ಷ ಕೋಟಿಯಷ್ಟು ಹಣವನ್ನು ಅಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ ಎಂದು ಹೇಳಿದ್ದಾರೆ.

ಬಿಜೆಪಿ ಕೇವಲ ಭಾವನಾತ್ಮಕ ರಾಜಕೀಯ ಮಾಡುತ್ತಿದೆ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಜನಸಾಮಾನ್ಯರ ಹಸಿವು ನೀಗಿಸಲು, ಅವರ ಸಂಕಷ್ಟಗಳಿಗೆ ಪರಿಹಾರ ನೀಡಲು ಇಂತಹ ಒಂದೇ ಒಂದು ಯೋಜನೆ ನೀಡಿದ್ದೀರಾ ಎಂದು ಪ್ರಧಾನಮಂತ್ರಿಗಳು, ಅವರ ಪಕ್ಷದ ನಾಯಕರು ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿಗಳನ್ನು ಕೇಳಬಯಸುತ್ತೇನೆ ಎಂದು ಗುಡುಗಿದ್ದಾರೆ.

Tags: BJPcongressDKShivakumarElectionUttarapradesh
Previous Post

ಮತ್ತೊಂದು ಪ್ರಕರಣದಲ್ಲಿ ಮತ್ತೆ ಜಾಮೀನು ಪಡೆದ ರೇವಣ್ಣ ! ಸದ್ಯಕ್ಕೆ ಸೇಫ್ ಆದ್ರಾ ಮಾಜಿ ಸಚಿವ ?!

Next Post

ರೈತರ ಸಾಲಕ್ಕೆ ಬರ ಪರಿಹಾರ ಹಣ ಜಮೆ; ಬ್ಯಾಂಕ್ ಗಳ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

Related Posts

ಮೊಬೈಲ್‌ನಲ್ಲೇ ಲಕ್ಷಾಂತರ ರೂಪಾಯಿ ಶಾಪಿಂಗ್; ದೀಪಾವಳಿಯಲ್ಲಿ ಭಾರತೀಯರು ಖರೀದಿಸಿದ್ದೇನು?
ದೇಶ

ಮೊಬೈಲ್‌ನಲ್ಲೇ ಲಕ್ಷಾಂತರ ರೂಪಾಯಿ ಶಾಪಿಂಗ್; ದೀಪಾವಳಿಯಲ್ಲಿ ಭಾರತೀಯರು ಖರೀದಿಸಿದ್ದೇನು?

by Shivakumar
November 10, 2026
0

ಹಬ್ಬದ ಸಂಭ್ರಮ ಆರಂಭವಾಯಿತೆಂದರೆ ಮನೆಗಳಲ್ಲಿ ಸಿದ್ಧತೆಗಳೂ ಶುರುವಾಗುತ್ತವೆ. ಹೊಸ ಬಟ್ಟೆ, ಸಿಹಿತಿಂಡಿ, ಹೂವಿನ ಅಲಂಕಾರ, ಪೂಜಾ ಸಾಮಗ್ರಿ, ಉಡುಗೊರೆಗಳ ಖರೀದಿ ಹೀಗೆ ಹಲವು ಕೆಲಸಗಳಲ್ಲಿ ಜನರು ತೊಡಗಿಸಿಕೊಳ್ಳುತ್ತಾರೆ....

Read moreDetails
War with Iran has ended: Donald Trump's significant statement

ಇರಾನ್ ಜೊತೆಗಿನ ಯುದ್ಧ ಅಂತ್ಯಗೊಂಡಿದೆ : ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ

November 10, 2026
Thick smoke blankets India and Pakistan: Scene captured by NASA satellite

ಭಾರತ-ಪಾಕಿಸ್ತಾನವನ್ನು ಆವರಿಸಿರುವ ದಟ್ಟವಾದ ಹೊಗೆ: ನಾಸಾ ಉಪಗ್ರಹದಲ್ಲಿ ದೃಶ್ಯ ಸೆರೆ

November 10, 2026
A grandson does not have a birthright over his grandfather's property... Supreme Court's significant verdict

ಅಜ್ಜನ ಆಸ್ತಿಯ ಮೇಲೆ ಮೊಮ್ಮಗನಿಗೆ ಜನ್ಮಸಿದ್ಧ ಹಕ್ಕಿಲ್ಲ… ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

November 10, 2026
Why did Sonia Gandhi decline the post of Prime Minister? Surprising details revealed in her autobiography!

ಸೋನಿಯಾ ಗಾಂಧಿ  ಪ್ರಧಾನಿ ಹುದ್ದೆ ನಿರಾಕರಿಸಿದ್ದೇಕೆ? ಆತ್ಮಕಥೆಯಲ್ಲಿ ಅಚ್ಚರಿಯ ಮಾಹಿತಿ ಬಹಿರಂಗ!

November 10, 2026
Next Post
ಬಿಜೆಪಿ ಜಾಹಿರಾತಿಗೆ ಸಿಡಿಮಿಡಿಗೊಂಡ ಡಿಸಿಎಂ ಡಿಕೆಶಿ.. ಏನಂದ್ರು..?

ರೈತರ ಸಾಲಕ್ಕೆ ಬರ ಪರಿಹಾರ ಹಣ ಜಮೆ; ಬ್ಯಾಂಕ್ ಗಳ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada