ಆಡಳಿತರೂಢ ಬಿಜೆಪಿ ಸರ್ಕಾರವು ದೇಶವನ್ನು ಹಿಂದೂ ರಾಷ್ಟ್ರವನ್ನಾಗಿಸಲು ಯತ್ನಿಸುತ್ತಿದೆ ಇದೇ ಹೀಗೆ ಆದರೆ ಪಾಕಿಸ್ತಾನಕ್ಕೆ ಬಂದ ಗತಿ ನಮ್ಮಗೆ ಬರಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಗುಜಾರತ್ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿರುವ ಗೆಹ್ಲೋಟ್ ಚುನಾವಣಾ ಪೂರ್ವ ತಯಾರಿ ನಡೆಸುವ ನಿಟ್ಟಿನಲ್ಲಿ ಗುರುವಾರ ಪಕ್ಷದ ನಾಯಕರ ಜೊತೆ ಸಭೆ ನಡೆಸಿದ ಅಶೋಕ್ ಬಿಜೆಪಿ ವಿರುದ್ದ ಕೆಂಡಕಾರಿದ್ದಾರೆ.
ಆಡಳಿತರೂಢ ಬಿಜೆಪಿ ಸರ್ಕಾರವು ಧರ್ಮಗಳ ನಡುವೆ ಸಂಘರ್ಷವನ್ನ ತಂದು ಚುನಾವಣೆಗಳನ್ನು ಗೆಲ್ಲುತ್ತಿದೆ. ರಾಷ್ಟ್ರದಾದ್ಯಂತ ಹೋರಾಟಗಾರರು ಹಾಗೂ ಪತ್ರಕರ್ತರು ಸೇರಿದಂತೆ ಅನೇಕ ಮಂದಿಯನ್ನು ಬಂಧಿಸಿ ಅವರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ.
ಬಿಜೆಪಿ ನಿರಂಕುಶ ಪ್ರಭುತ್ವ ನಡೆಸಲು ಯತ್ನಿಸುತ್ತಿದೆ. ಧರ್ಮದ ವಿಚಾರವನ್ನ ಮುಂದಿಟ್ಟುಕೊಂಡು ಚುನಾವಣೆಗಳನ್ನು ಎದುರಿಸುತ್ತಿದೆ. ಈ ಪಕ್ಷಕ್ಕೆ ಯಾವುದೇ ತತ್ವ ಸಿದ್ದಾಂತ, ಕಾರ್ಯನೀತಿ, ಆಡಳಿತದ ಬಗ್ಗೆ ಯಾವುದೇ ಮಾದರಿ ಇಲ್ಲ. ಈ ಪಕ್ಷ ಭಾರತವನ್ನ ಹಿಂದೂ ರಾಷ್ಟ್ರವನ್ನಾಗಿ ಮಾಡಲು ಯತ್ನಿಸಿದರೆ ಪಾಕಿಸ್ತಾನಕ್ಕೆ ಬಂದ ಗತಿ ನಮ್ಮಗೆ ಬರಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡುವುದು ಸುಲಭ ಅಡಾಲ್ಫ್ ಹಿಟ್ಲರ್ ಕೂಡ ಇದನ್ನೇ ಅಳವಡಿಸಿಕೊಂಡಿದ್ದ. ಗುಜರಾತ್ ಮಾದರಿ ಎಂಬ ಹೆಸರಿನಲ್ಲಿ ದೇಶದ ಜನತೆಯನ್ನು ಬಿಜೆಪಿ ಮೂರ್ಖರನ್ನಾಗಿಸಿದೆ ಎಂದು ಹರಿಹಾಯ್ದಿದ್ದಾರೆ.