ಖೊ – ಖೊ ವಿಶ್ವಕಪ್ (Kho-Kho) ಟೂರ್ನಿಯ ಮೊದಲ ಮೊದಲ ಆವೃತ್ತಿಯಲ್ಲಿ, ಸರಣಿಯುದ್ದಕ್ಕೂ ಯಾವುದೇ ಪಂದ್ಯವನ್ನೂ ಸೋಲದೆ ಅಜೇಯವಾಗಿ ಉಳಿದಿದ್ದ ಭಾರತ (India) ವನಿತೆಯರ ತಂಡ ನಿನ್ನೆ (ಜ.19) ನೇಪಾಳವನ್ನು ಬಗ್ಗು ಬಡಿಯುವ ಮೂಲಕ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದೆ.
ಮೊಟ್ಟಮೊದಲ ಖೊ – ಖೊ ವಿಶ್ವಕಪ್ ಪಂದ್ಯಾಕೂಟದಲ್ಲಿ ನೇಪಾಳವನ್ನು (Nepal) ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೊ-ಖೊ ತಂಡಕ್ಕೆ ಅಭಿನಂದನೆಗಳು. ಚೊಚ್ಚಲ ಖೊ-ಖೊ ವಿಶ್ವಕಪ್ನಲ್ಲಿ ಭಾರತೀಯ ತಂಡಗಳ ಈ ಅಮೋಘ ಸಾಧನೆ ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ (Cm siddaramaiah) ಎಕ್ಸ್ ನಲ್ಲಿ ಪೋಸ್ಟ್ ಮಾಡಿ ವಿಜೇತ ತಂಡಕ್ಕೆ ಶುಭ ಹಾರೈಸಿದ್ದಾರೆ.
ಭಾರತದ ವನಿತೆಯರ ತಂಡದಲ್ಲಿ ಮೈಸೂರು ಜಿಲ್ಲೆಯ ಟಿ.ನರಸೀಪುರ (T narasipura) ತಾಲೂಕಿನ ಕುರುಬೂರಿನ ಯುವತಿ ಚೈತ್ರ. ಬಿ ಅವರು ವಿಶ್ವವಿಜೇತ ಮಹಿಳಾ ಖೊ-ಖೊ ತಂಡದ ಭಾಗವಾಗಿರುವುದು ನಾಡಿಗೆ ಹೆಮ್ಮೆಯ ಸಂಗತಿ. ಭಾರತೀಯರ ಪಾಲಿಗೆ ಇದೊಂದು ಐತಿಹಾಸಿಕ ದಿನ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.