ಜಮ್ಮು – ಕಾಶ್ಮೀರ : ಇಂದು ಮಧ್ಯಾಹ್ನ 3:15ರ ಸುಮಾರಿಗೆ ಜಮ್ಮು -ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ಸೇನೆಗೆ ಸೇರಿದ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಟ ಐವರು ಸೈನಿಕರು ಹುತಾತ್ಮರಾಗಿದ್ದಾರೆ. ಓರ್ವ ಸೈನಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ವಕ್ತಾರ ಲೆಫ್ಟಿನಂಟ್ ಕರ್ನಲ್ ದೇವೇಂದರ್ ಆನಂದ್ ಮಾಹಿತಿ ನೀಡಿದ್ದಾರೆ.

ಗುಡ್ಡಗಾಡು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿತ್ತು. ಮೇಂದರ್ ಉಪ ವಿಭಾಗದ ಭಾಟಾ ಧುರಿಯನ್ ಜಲಪಾತದ ಬಳಿಯಲ್ಲಿ ಮಿಂಚು ಬಡಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ವರದಿಗಳಲ್ಲಿ ತಿಳಿದು ಬಂದಿದೆ.
ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಭಾರತೀಯ ಸೇನೆಗೆ ಸೇರಿದ ಒಂದು ವಾಹನವು ಪೂಂಚ್ ಜಿಲ್ಲೆಯ ಭಿಂಬರ್ ಗಲಿಯಿಂದ ಸಾಂಗಿಯೋಟ್ ಮಾರ್ಗವಾಗಿ ಚಲಿಸುತ್ತಿದ್ದ ಸಂದರ್ಭದಲ್ಲಿ ಬೆಂಕಿಗೆ ಆಹುತಿಯಾಗಿದೆ. ಈ ದುರಂತದಲ್ಲಿ ಭಾರತೀಯ ಸೇನೆಗೆ ಸೇರಿದ ಐವರು ಯೋಧರು ಪ್ರಾಣ ಕಳೆದುಕೊಂಡಿದ್ದಾರೆ , ಒಬ್ಬರು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.











