• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತೀಯ ರಾಯಭಾರ ಕಚೇರಿಗೆ ಬೆಂಕಿ; ಖಲಿಸ್ತಾನಿ ಬೆಂಬಲಿಗರಿಂದ ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
July 4, 2023
in Top Story, ವಿದೇಶ
0
ಭಾರತೀಯ ರಾಯಭಾರ ಕಚೇರಿಗೆ ಬೆಂಕಿ; ಖಲಿಸ್ತಾನಿ ಬೆಂಬಲಿಗರಿಂದ ದಾಳಿ
Share on WhatsAppShare on FacebookShare on Telegram

ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್‌ ಕಚೇರಿಗೆ ಖಲಿಸ್ತಾನಿ ಬೆಂಬಲಿಗರು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಇದನ್ನು ಅಮೆರಿಕ ತೀವ್ರವಾಗಿ ಖಂಡಿಸಿದೆ. ಮಧ್ಯರಾತ್ರಿ ಕಚೇರಿಗೆ ನುಗ್ಗಿದ ಖಲಿಸ್ತಾನಿಗಳು ಬೆಂಕಿ ಹಚ್ಚಿದ್ದಾರೆ. ಇದರ ವಿಡಿಯೋ ಸಹ ಹಂಚಿಕೊಂಡಿದ್ದಾರೆ.

ADVERTISEMENT

ಈ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಜ್ವಾಲೆ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಿಬ್ಬಂದಿಗೆ ಗಾಯವಾಗಿಲ್ಲ. ಇದು ಕಳೆದ 5 ತಿಂಗಳಲ್ಲಿ ನಡೆದ ಎರಡನೇ ಘಟನೆ. ಈ ಹಿಂದೆಯೂ ಕಟ್ಟಡಕ್ಕೆ ನುಗ್ಗಿದ್ದ ಖಲಿಸ್ತಾನಿಗಳು ಧ್ವಂಸ ಮಾಡಿ ದಾಂಧಲೆ ಎಬ್ಬಿಸಿದ್ದರು.

ಇನ್ನು ಇದಕ್ಕೂ ಮೊದಲು ಖಲಿಸ್ತಾನಿ ಹೋರಾಟಗಾರರ ಸಂಘವಾದ ಸಿಖ್ ಫಾರ್ ಜಸ್ಟೀಸ್ನ ಗುರುಪತ್ವಂತ್ ಸಿಂಗ್ ಪನ್ನು ಎಂಬಾತ ಈ ಹಿಂದೆಯೇ ಭಾರತೀಯ ಕಾನ್ಸುಲೇಟ್‌ ಕಚೇರಿಗೆ ಬೆಂಕಿ ಹಚ್ಚಲಾಗುವುದು ಎಂದು ಜೂನ್ 30ರಂದು ಬೆದರಿಕೆ ಸಂದೇಶ ಕಳುಹಿಸಿದ್ದ.ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದೂ ಹೇಳಿದ್ದ. ಅದರಂತೆ ಘೋಷಿಸಿದ ಮರುದಿನವೇ ಅಂದರೆ, ಜುಲೈ 1ರಂದು ಮಧ್ಯರಾತ್ರಿ ಬೆಂಕಿ ಹಚ್ಚಿದ್ದಾರೆ.

ಬೆಂಕಿ ಹಚ್ಚಿದ ಖಲಿಸ್ತಾನಿ ಬೆಂಬಲಿಗರು

ಖಲಿಸ್ತಾನಿ ಬೆಂಬಲಿಗರು ಬೆಂಕಿ ಹಚ್ಚಿದ ವಿಡಿಯೋವನ್ನೂ ಬಿಡುಗಡೆ ಮಾಡಿದ್ದಾರೆ. ಕಳೆದ ತಿಂಗಳು ಕೆನಡಾದಲ್ಲಿ ಹತ್ಯೆಗೀಡಾದ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜಾರ್ ಹತ್ಯೆಗೆ ಸೇಡು ತೀರಿಸಿಕೊಳ್ಳುವುದಾಗಿ ವಿಡಿಯೋದಲ್ಲಿ ಹೇಳಲಾಗಿದೆ. ಕೆನಡಾದ ಸರ್ರೆಯಲ್ಲಿರುವ ಗುರುನಾನಕ್ ಗುರುದ್ವಾರದ ಹೊರಗೆ ಇಬ್ಬರು ಅಪರಿಚಿತ ಯುವಕರು ಖಲಿಸ್ತಾನಿ ಉಗ್ರ ನಿಜಾರ್‌ನನ್ನು ಗುಂಡಿಕ್ಕಿ ಕೊಂದಿದ್ದರು.

ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ವಿಡಿಯೋ ಬಿಡುಗಡೆ ಮಾಡಿ, ಜುಲೈ 8ರಂದು ಕೆನಡಾ, ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಯುರೋಪ್ ದೇಶಗಳಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳ ಹೊರಗೆ ತೀವ್ರ ಹೋರಾಟ ನಡೆಸಲಾಗುವುದು. ಅಷ್ಟೇ ಅಲ್ಲದೇ, ಈ ಹೋರಾಟಕ್ಕೆ ‘ಕಿಲ್ ಇಂಡಿಯಾ’ ಎಂದು ಹೆಸರಿಡಲಾಗಿದೆ. ಭಾರತೀಯ ರಾಯಭಾರಿ ಕಚೇರಿಗಳ ಹೊರಗೆ ಪ್ರತಿಭಟನೆ ಮತ್ತು ತ್ರಿವರ್ಣ ಧ್ವಜವನ್ನು ಅವಮಾನಿಸುವುದು ಉದ್ದೇಶವಾಗಿತ್ತು. ಬೆದರಿಕೆ ಬೆನ್ನಲ್ಲೇ ಭಾರತೀಯ ತನಿಖಾ ಸಂಸ್ಥೆಗಳು ಅಲರ್ಟ್ ಆಗಿದ್ದವು.

ಕಾನ್ಸುಲೇಟ್‌ ಕಚೇರಿಗೆ ಬೆಂಕಿ ಹಚ್ಚಿದ ಘಟನೆಯನ್ನು ಅಮೆರಿಕ ಖಂಡಿಸಿದೆ. ಅಮೆರಿಕ ಸರ್ಕಾರದ ವಕ್ತಾರ ಮ್ಯಾಥ್ಯೂ ಮಿಲ್ಲರ್ ಮಂಗಳವಾರ ಟ್ವೀಟ್ ಮಾಡಿದ್ದು, ‘ಘಟನೆಯ ಬಗ್ಗೆ ಫೆಡರಲ್ ಬ್ಯೂರೋ ಮೂಲಕ ತನಿಖೆ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ. 5 ತಿಂಗಳಲ್ಲಿ ಇದು ಎರಡನೇ ಘಟನೆಯಾಗಿದೆ. ಅಮೃತಪಾಲ್ ಬಿಡುಗಡೆಗೆ ಒತ್ತಾಯಿಸಿ ಖಲಿಸ್ತಾನ್ ಬೆಂಬಲಿಗರು ಮಾರ್ಚ್‌ನಲ್ಲಿ ಕಾನ್ಸುಲೇಟ್‌ ಕಚೇರಿಗೆ ಮುತ್ತಿಗೆ ಹಾಕಿದ್ದರು. ಇದಾದ ಬಳಿಕ ಕಚೇರಿಗೆ ಭದ್ರತೆ ನೀಡಲಾಗುವುದು ಎಂದು ಅಭಯ ನೀಡಿತ್ತು.

Tags: IndianEmbassyKhalistaniKhalistani terroristsusa
Previous Post

ಜುಲೈ 6ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ‘ಸಲಾರ್’ ಚಿತ್ರದ ಟೀಸರ್

Next Post

ಕೇಂದ್ರ ಸರ್ಕಾರದ ವಿರುದ್ಧ ರೈತ ನಾಯಕನ ಆಕ್ರೋಶ..!

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

by ಪ್ರತಿಧ್ವನಿ
April 7, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ಆಕ್ರಮಣಕಾರಿ ಆಳ್ವಿಕೆಯತ್ತ ಟ್ರಂಪ್ 2.0

ಭಾರತ-ಪಾಕಿಸ್ತಾನ ಯುದ್ಧ ತಡೆದದ್ದು ನನ್ನಿಂದಲೇ: ಟ್ರಂಪ್ ಪುನಃ ಹೇಳಿದ್ದೇನು ?

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
Next Post
ಕೇಂದ್ರ ಸರ್ಕಾರದ ವಿರುದ್ಧ ರೈತ ನಾಯಕನ ಆಕ್ರೋಶ..!

ಕೇಂದ್ರ ಸರ್ಕಾರದ ವಿರುದ್ಧ ರೈತ ನಾಯಕನ ಆಕ್ರೋಶ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada