ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಲ್ಲಿ ತಿರಂಗವನ್ನು ಹಿಡಿದುಕೊಂಡೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿನಲ್ಲಿದ್ದ ಬೂಟುಗಳನ್ನು ತೆಗೆದ ಘಟನೆ ನಡೆದಿದೆ.
ಇಂದು ಗಾಂಧಿ ಜಯಂತಿ ಅಂಗವಾಗಿ ಮುಂಜಾನೆ ಸಿಎಂ ಸಿದ್ದರಾಮಯ್ಯ ಅವರು ಶ್ರದ್ಧಾಂಜಲಿ ಅರ್ಪಿಸಲು ಆಗಮಿಸಿದ್ದರು.ಈ ವೇಳೆ ಅನೇಕ ಕಾರ್ಯಕರ್ತರು ಹಾಜರಿದ್ದರು. ಓರ್ವ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಲ್ಲಿ ಧ್ವಜವನ್ನು ಹಿಡಿದುಕೊಂಡು ಅವರ ಕಾಲಿಗೆ ಬೂಟುಗಳನ್ನು ತೆಗೆದಿದ್ದಾರೆ.
ಗುಲಾಮಗಿರಿಯ ದವಡೆಯಿಂದ ಮುಕ್ತವಾದ ಭಾರತ, ಇಂದು ವಿಶ್ವದ ಮುಂಚೂಣಿ ರಾಷ್ಟ್ರವಾಗಿದೆ. ರಾಷ್ಟ್ರಭಕ್ತಿ, ರಾಷ್ಟ್ರಧ್ವಜ, ರಾಷ್ಟ್ರ ಭಕ್ತರು ಎಂದರೆ ಕಾಂಗ್ರೆಸ್'ಗೆ ಯಾವಾಗಲೂ ಕಾಲ ಕಸ.
— Vijayendra Yediyurappa (@BYVijayendra) October 2, 2024
ಗುಲಾಮಗಿರಿಯನ್ನು ಆರಾಧಿಸಿಕೊಂಡು ಬಂದ ಕಾಂಗ್ರೆಸ್ಸಿಗರು ರಾಷ್ಟ್ರಧ್ವಜವನ್ನು ಗಾಂಧಿ ಜಯಂತಿಯಂದೇ ಗುಲಾಮಗಿರಿಯ ಸಂಕೇತದಂತೆ ಕಾಲಕಸವಾಗಿ ಕಂಡಿರುವುದು, ಸ್ವತಃ… pic.twitter.com/8OXQVE0yJz
ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು, ಶೂಗಳನ್ನು ತೆಗೆಯುವುದನ್ನು ಮುಂದುವರಿಸಿದ್ದ ಕಾರ್ಯಕರ್ತ ಕೈಯಿಂದ ಧ್ವಜವನ್ನು ತೆಗೆದುಹಾಕಿದರು.ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ.