ಐಪಿಎಲ್ ಟಿ-20 ಟೂರ್ನಿಯ ಫೈನಲ್ ಪಂದ್ಯದ ವೇಳೆ ಅಹಮದಾಬಾದ್ ಕ್ರೀಡಾಂಗಣದಲ್ಲಿ ಹಾಕಲಾಗಿದ್ದ ಜೆರ್ಸಿ ವಿಶ್ವದ ಅತೀ ದೊಡ್ಡ ಜೆರ್ಸಿ ಎಂಬ ವಿಶ್ವದಾಖಲೆಗೆ ಪಾತ್ರವಾಗಿದೆ.
ಐಪಿಎಲ್ ಟಿ-20 ಟೂರ್ನಿಯ ನಿರೂಪಕರಾಗಿ ಕಾರ್ಯ ನಿರ್ವಹಿಸಿದ ಭಾರತ ತಂಡದ ಮಾಜಿ ಕೋಚ್ ರವಿಶಾಸ್ತ್ರಿ, ಈ ಜೆರ್ಸಿ ವಿಶ್ವದ ಅತೀ ದೊಡ್ಡ ಜೆರ್ಸಿ ಎಂದು ಘೋಷಿಸಿದರು.
ಫೈನಲ್ ಪಂದ್ಯಕ್ಕೂ ಮುನ್ನ ನಡೆದ ಸಮಾರೋಪ ಸಮಾರಂಭದ ವೇಳೆ ಮೈದಾನದಲ್ಲಿ ಜೆರ್ಸಿಯನ್ನು ಪ್ರದರ್ಶಿಸಲಾಗಿದ್ದು, ಇದು 66×44 ಮೀಟರ್ ಅಳತೆಯದ್ದಾಗಿದೆ.
ಜೆರ್ಸಿ ನಂಬರ್ 15 ಆಗಿದ್ದು, ಇದು ೧೫ನೇ ಆವೃತ್ತಿಯ ಜೆರ್ಸಿ ಎಂದು ಬಿಂಬಿಸಲಾಗಿದೆ. ಅಲ್ಲದೇ ಈ ಜೆರ್ಸಿಯಲ್ಲಿ 10 ತಂಡಗಳ ಲೋಗೋ ಬಳಸಲಾಗಿದೆ.
ಅಹಮದಾಬಾದ್ ಕ್ರೀಡಾಂಗಣ ಅತೀ ದೊಡ್ಡ ಕ್ರೀಡಾಂಗಣವಾಗಿದ್ದು, 1.32 ಲಕ್ಷ ಆಸನ ಸಾಮರ್ಥ್ಯ ಹೊಂದಿದ್ದು, ಆತಿಥೇಯ ಗುಜರಾತ್ ಟೈಟಾನ್ಸ್ ತಂಡ 7 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಮೊದಲ ಪ್ರವೇಶದಲ್ಲೇ ಪ್ರಶಸ್ತಿ ಗೆದ್ದ ಸಾಧನೆ ಮಾಡಿತು.