ಸಿಎಂ ಸಿದ್ದರಾಮಯ್ಯ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್‌ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ ಎಂದು ಸಚಿವ ಸಮಾಜ ಕಲ್ಯಾಣ ಡಾ.ಎಚ್.ಸಿ. ಮಹದೇವಪ್ಪ ಮಾಹಿತಿ ನೀಡಿದ್ದಾರೆ. ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತಾಡಿದ ಅವ್ರು, ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಪೂರೈಕೆ ಬಗ್ಗೆ ಇನ್ನೂ ಏನು ತೀರ್ಮಾನಿಸಿಲ್ಲ, ಇಂದಿರಾ ಕ್ಯಾಂಟೀನ್‌ನಲ್ಲಿ ಸರ್ಕಾರದಿಂದ ಸಸ್ಯಾಹಾರದ ಊಟ ಕೊಡುತ್ತೇವೆ. ಹೊರಗಡೆಯಿಂದ ಮಾಂಸಾಹಾರ ತಂದು ಇಂದಿರಾ ಕ್ಯಾಂಟೀನ್‌ನಲ್ಲಿ ತಿನ್ನಬಹುದು ಎಂದರು.ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇಂದಿರಾ ಕ್ಯಾಂಟೀನ್ ಶುರು ಮಾಡುವ ಪ್ರಸ್ತಾಪವಿದ್ದು, ಮಾಂಸಾಹಾರ ನೀಡುವ ಬಗ್ಗೆ ಸದ್ಯಕ್ಕೆ ಚಿಂತನೆ ಇಲ್ಲ, ಇನ್ನೂ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ನೀಡಲು ತೀರ್ಮಾನಿಸಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ನೀಡಲು ಹಿಂದೇಟು ಹಾಕಿದೆ. ಮುಖ್ಯಮಂತ್ರಿಗಳು ಕೇಂದ್ರದೊಂದಿಗೆ ಮಾತನಾಡುತ್ತಿದ್ದಾರೆ. ಕೇಂದ್ರ ಸರ್ಕಾರ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದರೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ರಾಜಕೀಯ ಜೀವನ ಮೆಲಕು..
ಜನರಿಗೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಸೋಲು ಕಂಡಿದ್ದೆ. ಸೋತಾಗ ಕುಗ್ಗಿಲ್ಲ, ಗೆದ್ದಾಗ ಬೀಗಿಲ್ಲ. ಸಾಕಷ್ಟು ಅಭಿವೃದ್ಧಿ ಮಾಡಿದ್ರೂ ನಾನು ಪ್ರಚಾರ ಪಡೆಯಲಿಲ್ಲ ಎಂದು ಸಚಿವ ಹೆಚ್.ಸಿ.ಮಹದೇವಪ್ಪ. ಹೇಳಿದರು.ಚುನಾವಣೆಯಲ್ಲಿ ನಾನು 6 ಬಾರಿ ಗೆದ್ದಿದ್ದೇನೆ, ಮೂರು ಬಾರಿ ಸೋತಿದ್ದೇನೆ. ಮೂರು ಬಾರಿಯೂ ನನ್ನಿಂದ ನಾನೇ ಸೋತಿದ್ದೇನೆ. ಗೆದ್ದಾಗ ಮಂತ್ರಿ ಆಗುತ್ತಿದ್ದೆ, ಜನರಿಗೆ ಹೆಚ್ಚು ಸಮಯ ಕೊಡುತ್ತಿರಲಿಲ್ಲ. ಕಾರ್ಯಕರ್ತರಿಂದ ದೂರವಾಗಿದ್ದ ಕಾರಣ ಸೋಲಾಯಿತು ಅಷ್ಟೇ. ಸೋತಾಗ ಕುಗ್ಗಿಲ್ಲ, ಗೆದ್ದಾಗ ಬೀಗಿಲ್ಲ ಎಂದರು.
ನಾನು ಯಾವತ್ತೂ ಟಿಕೆಟ್ ಕೇಳಿಲ್ಲ, ನನ್ನ ಹೋರಾಟ ನೋಡಿ ಟಿಕೆಟ್ ನೀಡಿದ್ದಾರೆ. ನಾನು ತೆರೆದ ಪುಸ್ತಕ, ಯಾರು ಬೇಕಾದರೂ ನೋಡಬಹುದು. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ, ಆದರೆ ಪ್ರಚಾರ ಪಡೆಯಲಿಲ್ಲ. ದುರಾದೃಷ್ಟವಶಾತ್ ಕಾಂಗ್ರೆಸ್ಸಿಗರು ನನ್ನ ಕೆಲಸದ ಪ್ರಚಾರ ಮಾಡಲಿಲ್ಲ. ನನ್ನ ಅವಧಿಯಲ್ಲಿ ಎಲ್ಲವನ್ನೂ ಕ್ರೋಡೀಕರಿಸಿ ಉತ್ತಮ ದಸರಾ ಮಾಡಿದ್ದೇನೆ. ನಿಜವಾದ ವೈಚಾರಿಕತೆ ಹಾಗೂ ಸಾಂವಿಧಾನಿಕ ದಸರಾ ಆಚರಣೆ ಮಾಡಿದ್ದೇನೆ ಎಂದು ಹೆಚ್.ಸಿ ಮಹದೇವಪ್ಪ ತಿಳಿಸಿದರು.ಅಕ್ಕಿ ಪೂರೈಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಹೆಚ್ಚುವರಿ ಅಕ್ಕಿ ಕೇಳಿದ್ರೆ ಚುನಾವಣೆಗೂ ಮುನ್ನ ನಮ್ಮನ್ನು ಕೇಳಿದ್ರಾ ಅಂತಾರೆ . ಪ್ರಣಾಳಿಕೆ ಬಗ್ಗೆ ಇನ್ನೊಂದು ಪಕ್ಷದ ಜೊತೆ ಚರ್ಚಿಸಲು ಆಗುತ್ತಾ..? ಎಂದು ಹೆಚ್.ಸಿ ಮಹದೇವಪ್ಪ ಚಾಟಿ ಬೀಸಿದರು