• Home
  • About Us
  • ಕರ್ನಾಟಕ
Tuesday, October 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಧರ್ಮ-ಜಾತಿ ಹೆಸರಲ್ಲಿ ಸಮಾಜ ಒಡೆದಿದ್ದರಿಂದಲೇ ಅಸಮಾನತೆ ಹೆಚ್ಚುತ್ತಿದೆ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 24, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಿದ್ದ ’21ನೇ ಶತಮಾನಕ್ಕೆ ಮಹಾತ್ಮಾ ಗಾಂಧೀಜಿ’ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.“ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

“ಗಾಂಧೀಜಿ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ.‌ ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಬ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು”ಎಂದರು.

“ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ ಅವರ ಮಾತನ್ನು ಪ್ರಸ್ತಾಪಿಸಿ, ಮನುಷ್ಯ ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ” ಎಂದು ಹೇಳಿದರು.

“ಪ್ರಕೃತಿ ನಮ್ಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಅದು ಪೂರೈಸುವುದಿಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣ” ಎಂದರು.

“ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಅವರ ಕಾಲಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಢ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ ಈಗ ಸಿಕ್ಕಾಪಟ್ಟೆ ಮಳೆ ಬರುತ್ತಿದೆ” ಎಂದು ತಿಳಿಸಿದರು.

“ದೇಶದ ಶೇ.85 ರಷ್ಟು ಆಸ್ತಿ ಶೇ.1ರಷ್ಟು ಶ್ರೀಮಂತರ ಕೈಗೆ ಸೇರುತ್ತಿದೆ. ಇದು ಅಪಾಯಕಾರಿ. ಈ ಆರ್ಥಿಕ ಅಸಮಾನತೆ ಹೋಗಲಾಡಿಸಲು ಗಾಂಧಿಯವರು ವಿಚಾರಗಳಲ್ಲಿ ಮಾರ್ಗಗಳಿವೆ. ಮಹಾತ್ಮಗಾಂಧಿಯವರು‌ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸುತ್ತೇವೆ” ಎಂದರು.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ರಾಮಚಂದ್ರ ರಾಹಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಕಾರ್ಯಾಧ್ಯಕ್ಷರಾದ ವಿಶುಕುಮಾರ್, ನವದೆಹಲಿ ಸ್ಮಾರಕ ನಿಧಿ ಅಧ್ಯಕ್ಷ ಸಂಜೋಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Tags: CM SiddaramaiahCongress PartyDCM DK Shivakumarinternational symposium 'Mahatma Gandhi
Previous Post

ಒಂದೇ ಮಹಿಳೆಗೆ ಅಪ್ಪ-ಮಗ ನಿಂದ ಲೈಂಗಿಕ ದೌರ್ಜನ್ಯ ! ಎಸ್.ಐ.ಟಿ ತನಿಖೆಯಲ್ಲಿ ಆರೋಪ ಸಾಬೀತು ! 

Next Post

ಚನ್ನಪಟ್ಟಣ ಬೈ ಎಲೆಕ್ಷನ್ : ನನಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ : ಸಿಪಿ ಯೋಗೇಶ್ವರ್

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
Next Post

ಚನ್ನಪಟ್ಟಣ ಬೈ ಎಲೆಕ್ಷನ್ : ನನಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ : ಸಿಪಿ ಯೋಗೇಶ್ವರ್

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada