ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಬೋರ್ಡ್ ಪರೀಕ್ಷೆಗೆ ತಡೆ ಕೋರಿ ಕೋರ್ಟ್ ಮೆಟ್ಟಿಲು ಹತ್ತಿದ್ದ ಖಾಸಗಿ ಶಾಲಾ ಒಕ್ಕೂಟಕ್ಕೆ ಜಯ ಸಿಕ್ಕಿದೆ. ಇಂದು ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್, ವಿಚಾರಣೆ ಪೂರ್ಣಗೊಳ್ಳುವವರೆಗೂ ಪರೀಕ್ಷೆ ನಡೆಸದಂತೆ ಆದೇಶ ಮಾಡಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಬೇಲಾ ತ್ರಿವೇದಿ ಮತ್ತು ಪಂಕಜ್ ಮಿತ್ತಲ್ ಪೀಠದಲ್ಲಿ ವಿಚಾರಣೆ ನಡೆದಿದ್ದು, ಮದ್ಯಂತರ ಆದೇಶದ ಮೂಲಕ ಪರೀಕ್ಷೆ ನಡೆಸೋಕೆ ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ. ವಿಚಾರಣೆ ಪೂರ್ಣ ಆಗುವ ತನಕ ಪರೀಕ್ಷೆ ನಡೆಸದಂತೆ ಆದೇಶ ಮಾಡಿದ್ದಾರೆ. ಹೀಗಾಗಿ 5, 8 ಮತ್ತು 9 ನೇ ತರಗತಿಗೆ ಬೋರ್ಡ್ ಪರೀಕ್ಷೆಗೆ ಸುಪ್ರೀಂಕೋರ್ಟ್ ತಡೆ ಸಿಕ್ಕಂತಾಗಿದೆ.

ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ದಿನಾಂಕ-13-3-2024ರಂದು ನಿಗದಿಯಾಗಿದ್ದ ಪರೀಕ್ಷೆ ಮುಂದೂಡಿ ಶಿಕ್ಷಣ ಇಲಾಖೆ ಆದೇಶ ಮಾಡಿದೆ. ಮುಂದಿನ ಆದೇಶದವರೆಗೆ ಪರೀಕ್ಷೆ ಪೋಸ್ಟ್ ಪೋನ್ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಅಲ್ಲಿಗೆ ಈಗಾಗಲೇ ಎರಡು ದಿನಗಳ ಕಾಲ ಪರೀಕ್ಷೆ ಬರೆದಿದ್ದ ಮಕ್ಕಳಿಗೆ ಮಧ್ಯಂತರ ಬ್ರೇಕ್ ಸಿಕ್ಕಂತಾಗಿದೆ.