• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜಭವನ ಚಲೋ ಬದಲು ಸೋನಿಯಾ ಗಾಂಧಿ ಮನೆ ಚಲೋ ಮಾಡಲಿ ಎಂದು ಕಾಂಗ್ರೆಸ್ಸಿಗರಿಗೆ ತಿರುಗೇಟು ಕೊಟ್ಟ: ಸಚಿವ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
August 28, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಮಂಡ್ಯ: ಪ್ರಿಯಾಂಕ ಖರ್ಗೆ ಮಾತಿಗೆ ಮುಂಚೆ ಊರಿಗೆಲ್ಲ ಬುದ್ಧಿ ಹೇಳುತ್ತಿದ್ದರು. ಈಗ ಅವರೇ ಬುದ್ಧಿ ಹೇಳಿಸಿಕೊಳ್ಳುವ ಸ್ಥಿತಿಗೆ ಬಂದು ತಲುಪಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ADVERTISEMENT

ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಖರ್ಗೆ ಅವರ ಕುಟುಂಬ ಕೆಐಡಿಬಿಯಿಂದ ಸಿಎ ಸೈಟ್ ಪಡೆದಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಹಲವಾರು ಜನರಿಗೆ ಈ ರೀತಿಯಲ್ಲಿ ಜಾಗ ಕೊಟ್ಟಿದ್ದಾರೆ, ಬೇಕಾದಷ್ಟು ಪ್ರಕರಣಗಳು ನಡೆದಿವೆ.

ಖರ್ಗೆ ಅವರು ದೇಶಕ್ಕೆ, ನಾಡಿಗೆಲ್ಲ ಬುದ್ದಿ ಹೇಳುವವರು, ಉಪದೇಶ ಮಾಡುವವರು. ಯಾವ ಆಧಾರದ ಮೇಲೆ ಈ ಜಾಗವನ್ನು ಇವರು ತೆಗೆದುಕೊಂಡಿದ್ದಾರೆ? ಎಂದು ಪ್ರಶ್ನಿಸಿದರು.ದುಡ್ಡು ಕೊಟ್ಟು ಖರೀದಿಸಲು ಆಗುತ್ತಿರಲಿಲ್ಲವಾ? ಖಾಸಗಿ ಜಮೀನು ಖರೀದಿ ಮಾಡಬಹುದಿತ್ತು. =ಕೆಐಎಡಿಬಿ ಜಾಗವೇ ಬೇಕಿತ್ತಾ? ಇದು ಅಧಿಕಾರ ದುರಪಯೋಗ. ದೇಶಕ್ಕೆ ಬುದ್ದಿ ಹೇಳುವವರು ಇದಕ್ಕೆ ಉತ್ತರ ಹೇಳಬೇಕು ಎಂದು ಅವರು ಟೀಕಿಸಿದರು.

ರಾಜಭವನ ಚಲೋಗೆ ಸಚಿವರ ವ್ಯಂಗ್ಯ:ಕಾಂಗ್ರೆಸ್ ನಾಯಕರು ಆ. 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ ಬಹಳ ಸಂತೋಷ. ಅವರು ರಾಜಭವನದ ಜೊತೆಗೆ ರಾಷ್ಟ್ರಪತಿ ಭವನ ಚಲೋ ಕೂಡ ಮಾಡಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮನೆಗೆ ಕೂಡ ಹೋಗಲಿ. ಸತ್ತಿರುವ ವಿಚಾರ ಇಟ್ಟುಕೊಂಡು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಮಹಾನ್ ಅಪರಾಧ ಮಾಡಿದ್ದಾರೆ ಎನ್ನುತ್ತಿದ್ದಾರೆ. ನಾನೇ ಕೈ ಜೋಡಿಸಿ ಮನವಿ ಮಾಡುತ್ತೇನೆ . ರಾಜ್ಯಪಾಲರ ಅನುಮತಿ ಪಡೆದು ತನಿaಚರ್ಚೆ ಮಾಡಲು ಬಹಳಷ್ಟು ವಿಚಾರಗಳು ಇವೆ. ಪಾಪ ನಮ್ಮನ್ನು ಕೆದಕಿದ್ದಾರೆ. ನಿನ್ನೆಯ ದಿನ ಅಸಲಿ ನಕಲಿ ಎಂದು ಹೇಳಿದ್ದಾರೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಸತ್ತವರ ಹೆಸರಲ್ಲಿ ಭೂಮಿ ಖರೀದಿ ಮಾಡಿದ್ದಾರೆ. ಡಿ ನೋಟಿಫಿಷನ್ ಮಾಡಿಕೊಂಡು ಜೀವನ ಮಾಡುವವರು ಇವರು. ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಇವರಿಗೆ ಇದೀಯಾ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಮಂತ್ರಿಗಳ ಲೇಟರ್ ಪ್ಯಾಡ್ ನಲ್ಲಿ ಈ ಜನ ಏನೆಲ್ಲಾ ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಎಲ್ಲರಿಗೂ ಇದೆ. ಮೂಡಾ ದಾಖಲೆಗಳಲ್ಲಿ ಸಹಿ ವ್ಯತ್ಯಾಸ ಜನ ಮಾತನಾಡುತ್ತಿದ್ದಾರೆ. ಈ ಹಗರಣದಲ್ಲಿ ಆಗಿರುವ ಬೆಳವಣಿಗೆ ಬಗ್ಗೆ ಟಾರ್ಚ್ ಹಾಕಿ ನೋಡಿದರೂ ಅಷ್ಟೇ, ಹಾಕದೇ ನೋಡಿದರೂ ಅಷ್ಟೇ. ಅದು ಸರ್ಕಾರಿ ಭೂಮಿ. ಸರ್ಕಾರಿ ಭೂಮಿ ಲಪಟಾಯಿಸಿ ಮೂಡಾ ಸೈಟ್ ಪಡೆದಿದ್ದಾರೆ. ಇದಕ್ಕೆ ಉತ್ತರ ಕೊಡಲಿ ಎಂದು ಅವರು ಒತ್ತಾಯ ಮಾಡಿದರು.

ಕಾನೂನು ಪ್ರಕಾರ ಎಷ್ಟು ಸೈಟ್ ಬೇಕಾದರೂ ಪಡೆಯಿರಿ. ಇದಕ್ಕೆ ನಮ್ಮ ವಿರೋಧವಿಲ್ಲ. ಸುಳ್ಳು ದಾಖಲೆ ಸೃಷ್ಟಿ ಮಾಡಿ, ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಇಂಥ ಕೆಲಸ ಮಾಡಿದ್ದಾರೆ. ಸಾಮಾನ್ಯ ರೈತನೊಬ್ಬ ಬಂದು ಜಮೀನು ಖಾತೆ ಮಾಡಲು ಹೇಳಿದರೆ ಮಾಡಿಕೊಡುತ್ತಾರಾ? ಭೂ ಪರಿವರ್ತನೆ ಮಾಡಿದ್ದೀರಿ ಅಲ್ಲವೇ? ಅದು ಯಾರ ಭೂಮಿ?ಆ ವ್ಯಕ್ತಿ ಸತ್ತು 25 ವರ್ಷವಾಗಿದೆ. ಸತ್ತಿರುವ ವ್ಯಕ್ತಿಯ ಹೆಸರಲ್ಲಿ ಡಿನೋಟಿಫಿಕೇಷನ್ ಮಾಡಿದ್ದೀರಿ. ಸತ್ತಿರುವ ಲಿಂಗನ ಹೆಸರಲ್ಲಿ ಡಿನೋಟಿಫಿಕೇಷನ್ ‌ಮಾಡಿಸಿದ್ದು ಯಾರು? ಎಂದು ಸಚಿವರು ಪ್ರಶ್ನಿಸಿದರು.

Tags: Praiyanka kharge ministerUnion minister HD Kumaraswamyಜೆಡಿಎಸ್​
Previous Post

ಭುವನಂ ಗಗನಂ’ ಜೊತೆಯಾದ ಕಿಚ್ಚ ಸುದೀಪ್.ಪ್ರಮೋದ್- ರೆಚೆಲ್ ಪ್ರೇಮಗೀತೆಗೆ ರಿಲೀಸ್

Next Post

ಕಣ್ಸನ್ನೆ, ಕೈಸನ್ನೆ ಮೂಲಕ ಹಣದ ಆಮಿಷ- ಮಂಡ್ಯ ಶಾಸಕನ ವಿರುದ್ಧ ಹೆಚ್‌ಡಿಕೆ ಆರೋಪ

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
Next Post

ಕಣ್ಸನ್ನೆ, ಕೈಸನ್ನೆ ಮೂಲಕ ಹಣದ ಆಮಿಷ- ಮಂಡ್ಯ ಶಾಸಕನ ವಿರುದ್ಧ ಹೆಚ್‌ಡಿಕೆ ಆರೋಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada