ಬೀದರ್: ತಾಲ್ಲೂಕಿನ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯ ವಿಳಾಸಪುರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಅವಮಾನ ಮಾಡಿರುವ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಣದಯ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.,
ಅಂಬೇಡ್ಕರ್ ಅವರು ಎಲ್ಲ, ಜಾತಿ, ಧರ್ಮ, ಸಮುದಾಯದವರೂ ಗೌರವಯುತವಾಗಿ ಸಮಾಜದಲ್ಲಿ ಬಾಳುವಂಥ ಸಂವಿಧಾನವನ್ನು ನೀಡಿದ್ದಾರೆ. ಅಂತಹ ಮಹಾನುಭಾವರಿಗೆ ಅವಮಾನ ಮಾಡುವುದು ಅಕ್ಷಮ್ಯ. ಕೆಲವು ಕಿಡಿಗೇಡಿಗಳು ಜಿಲ್ಲೆಯ ಶಾಂತಿಯನ್ನು ಕದಡುವ ಪ್ರಯತ್ನ ಮಾಡುತ್ತಿದ್ದಾರೆ.ತಮ್ಮ ಸ್ವಾರ್ಥ ಸಾಧನೆಗಾಗಿ ಸಾಮಾಜಿಕ ಸ್ವಾಸ್ಥ್ಯ ಕದಡುವುದು ಸರಿಯಲ್ಲ. ಅಂಥ ಕಿಡಿಗೇಡಿಗಳ ವಿರುದ್ಧ ಜಿಲ್ಲಾಡಳಿತ ಎಚ್ಚರದಿಂದಿರಬೇಕು’ ಎಂದು ತಿಳಿಸಿದ್ದಾರೆ.
ಗ್ರಾಮದಲ್ಲಾಗಲೀ, ಜಿಲ್ಲೆಯಲ್ಲಾಗಲೀ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಬಾರದಂತೆ ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.ಜನ ಕೂಡ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.