ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಜೂನ್‌ 30 ರವರೆಗೆ ಮುಂದೂಡಿಕೆ- ಡಿಜಿಸಿಎ

ಕರೋನಾ ಕಾರಣದಿಂದಾಗಿ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಹಾರಾಟವನ್ನು ಜೂನ್‌ 30 ರವರೆಗೆ ನಿಷೇಧಿಸಲಾಗಿದೆ. ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸುತ್ತೋಲೆ ಬಿಡುಗಡೆಗೊಳಿಸಿದೆ.

ಈ ನಿರ್ಬಂಧಗಳು ಅಂತರರಾಷ್ಟ್ರೀಯ ಆಲ್-ಕಾರ್ಗೋ ಕಾರ್ಯಾಚರಣೆಯ ವಿಮಾನಗಳಿಗೆ ಮತ್ತು ಡಿಜಿಸಿಎ ನಿರ್ದಿಷ್ಟವಾಗಿ ಅನುಮೋದಿಸಿದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೋವಿಡ್‌ 19 ನಿಂದ 2020 ಮಾರ್ಚ್‌ 23 ರಿಂದ ಕೆಲವು ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಹಾರಾಟವನ್ನು ನಿಷೇಧಿಸಲಾಗಿತ್ತು. ಆದರೆ ಮೇ ತಿಂಗಳಲ್ಲಿ ವಂದೇ ಮಾತರಂ ಮಿಷನ್‌ ಅಡಿಯಲ್ಲಿ ಮತ್ತು ಜುಲೈನಿಂದ ದ್ವಿಪಕ್ಷೀಯ ಒಪ್ಪಂದದ ಮೇರೆಗೆ ವಿಮಾನಗಳು ಕಾರ್ಯನಿರ್ವಹಿಸುತ್ತಿದ್ದವು.

2021 ಫೆಬ್ರವರಿ, ಏಪ್ರಿಲ್‌ ತಿಂಗಳಲ್ಲಿ ಭಾರತದಲ್ಲಿ ಕೋವಿಡ್‌ ಅಲೆ ಹೆಚ್ಚಾದ ಕಾರಣ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಕೆನಡಾ, ಫ್ರಾನ್ಸ್, ಜರ್ಮನಿ, ಹಾಂಗ್ ಕಾಂಗ್, ಇಂಡೋನೇಷ್ಯಾ, ಇರಾನ್, ಇಟಲಿ, ಕುವೈತ್, ನ್ಯೂಜಿಲ್ಯಾಂಡ್, ಸೌದಿ ಅರೇಬಿಯಾ, ಸಿಂಗಾಪುರ್ ಸೇರಿದಂತೆ ಇತರೆ ದೇಶಗಳು ಭಾರತದ ವಿಮಾನಗಳಿಗೆ ನಿಷೇಧ ಹೇರಿದ್ದವು. ಇದೀಗ ಕೆಲವು ದೇಶಗಳು ಹೊರಗಿನ ವಿಮಾನ ಹಾರಾಟದ ಮೇಲಿನ ನಿಷೇಧವನ್ನು ತೆಗೆದು ಹಾಕಿವೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...