• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 13, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ದಕ್ಷಿಣ ಭಾರತ ರಾಜ್ಯಗಳ ಪೋಲೀಸ್ ಮಹಾನಿದೇರ್ಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

ಹಗಲಿರುಳು ಎನ್ನದೇ ಕಾರ್ಯನಿರ್ವಹಿಸುವ ಪೋಲಿಸ್ ಪಡೆಗಳ ಕಾರ್ಯವನ್ನು ಶ್ಲಾಘಿಸಿದ ಮುಖ್ಯಮಂತ್ರಿಗಳು, ಸೈಬರ್ ಅಪರಾಧಗಳನ್ನು ತಡೆಗಟ್ಟುವಲ್ಲಿ ನಿಟ್ಟಿನಲ್ಲಿ ಪೋಲಿಸರು ಕ್ರಿಯಾತ್ಮಕವಾಗಿರಬೇಕು. ಕಳೆದ ಹಲವು ವರ್ಷಗಳಲ್ಲಿ ಸೈಬರ್ ದಾಳಿಗಳು ವಿವಿಧ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಆನ್ ಲೈನ್ ಮೂಲಕ ಮೋಸ ಮಾಡುವುದು ಅಧಿಕವಾಗಿದೆ. ಇದು ವ್ಯಕ್ತಿಗತವಾಗಿ ಹಾನಿಯಲ್ಲದೇ ರಾಷ್ಟ್ರೀಯ ಭದ್ರತೆಗೂ ಅಪಾಯಕಾರಿಯಾಗಿದೆ ಎಂದರು.

ಅತ್ಯಾಧುನಿಕ ವಿಧಿವಿಜ್ಞಾನ ಸಾಧನಗಳು ಸೈಬರ್ ಅಪರಾಧಿಗಳನ್ನು ಮಟ್ಟಹಾಕಲು ಸಹಾಯಕವಾಗಿವೆ. 2003 ರಲ್ಲಿ ಸೈಬರ್ ಅಪರಾಧಗಳ ಪೋಲೀಸ್ ಠಾಣೆಯನ್ನು ತೆರೆದ ಮೊದಲ ರಾಜ್ಯ ಕರ್ನಾಟಕ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಸೈಬರ್ ಅಪರಾಧ ತಡೆಗಾಗಿ ಸಿಇಎನ್ ಪೋಲಿಸ್ ಠಾಣೆಗಳನ್ನು ರಾಜ್ಯ ಹೊಂದಿದೆ. ಇಂಥ ಪ್ರಕರಣಗಳನ್ನು ನಿರ್ವಹಿಸಲೆಂದೇ ಸೈಬರ್ ಠಾಣೆಯ ಪೋಲಿಸ್ ಅಧಿಕಾರಿಗಳು ವಿಶೇಷ ತರಬೇತಿ ಪಡೆದಿದ್ದಾರೆ ಎಂದರು.

ಪ್ರತಾಪ್‌ ಸಿಂಹ
ಮುಖ್ಯಮಂತ್ರಿ ಸಿದ್ದರಾಮಯ್ಯ

ಆಂತರಿಕ ಭದ್ರತೆ

ನಮ್ಮ ದೇಶದ ಬುನಾದಿ ಹಾಗೂ ಸಮಾಜದ ಸಂರಚನೆಗೆ ಸವಾಲಾಗಿರುವ ಆಂತರಿಕ ಭದ್ರತಾ ವಿಷಯಗಳು ತಮ್ಮ ಸಂಪೂರ್ಣ ಗಮನ ಮತ್ತು ಸಹಯೋಗ ಅಗತ್ಯ ಎಂದರು. ಕಾನೂನು ಸುವ್ಯವಸ್ಥೆ ಕಾಪಾಡುವುದು, ಸಾರ್ವಜನಿಕ ವ್ಯವಸ್ಥೆ ಹಾಗೂ ತಮ್ಮ ಪ್ರದೇಶದ ಪ್ರತಿಯೊಬ್ಬರ ಸುರಕ್ಷತೆ ಹಾಗೂ ಭದ್ರತೆಯ ಜವಾಬ್ದಾರಿಯನ್ನು ಹೊತ್ತಿರುವ ಪೋಲೀಸರಿಂದ ಅಚಲ ಬದ್ಧತೆ, ಸಮರ್ಪಣೆ ಹಾಗೂ ಕರ್ತವ್ಯಪರತೆಯನ್ನು ನಿರೀಕ್ಷಿಸಲಾಗುತ್ತದೆ ಎಂದರು.

ಪೋಲಿಸ್ ತಂತ್ರಗಾರಿಕೆಯಲ್ಲಿ ನಿರಂತರ ಮಾರ್ಪಾಡು ಅಗತ್ಯ
ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಪರಾಧಿ ಚಟುವಟಿಕೆಗಳಿಂದ ಹಿಡಿದು ಡಿಜಿಟಲ್ ವಲಯದ ಬೆದರಿಕೆಗಳನ್ನೂ ದೇಶ ಎದುರಿಸುತ್ತಿದೆ. ಆಧುನಿಕ ಸಮಾಜದ ಸಂಕೀರ್ಣತೆಗಳೂ ಕೂಡ ಹೊಸ ಮಾದರಿಯ ಅಪರಾಧಗಳನ್ನು ಹೆಚ್ಚಿಸಿವೆ. ಇದರಿಂದಾಗಿ ಪೋಲಿಸ್ ತಂತ್ರಗಾರಿಕೆಯಲ್ಲಿಯೂ ನಿರಂತರವಾಗಿ ಮಾರ್ಪಾಡು ತರಬೇಕಾದ ಅವಶ್ಯಕತೆ ಇದೆ ಎಂದರು.

ಕಾನೂನು ಪಾಲಕರಾಗಿ ತಾವುಗಳು ಸಮಾಜದ ಸ್ವಾಸ್ವ್ಥವನ್ನು ಹಾಳು ಮಾಡುವವರಿಂದ, ಶಾಂತಿ ಕದಡುವವರಿಗಿಂತ ಒಂದು ಹೆಜ್ಜೆ ಮುಂದಿರಿರಬೇಕಲ್ಲದೇ ಶೀಘ್ರವಾಗಿ ಹೊಂದಿಕೊಂಡು ನವೀನ ಮಾದರಿಯನ್ನು ಅಳವಡಿಸಿಕೊಳ್ಳಬೇಕು ಎಂದರು.

ಮಾದಕವಸ್ತು ನಿಯಂತ್ರಣ
ಮಾದಕವಸ್ತು ನಿಯಂತ್ರಣದಲ್ಲಿ ಕರ್ನಾಟಕ ರಾಜ್ಯ ಪೋಲಿಸ್ ಅತ್ಯುತ್ತಮ ಕೆಲಸ ಮಾಡಿದ್ದು ಅಂತರರಾಷ್ಟ್ರೀಯ ಮಾದಕವಸ್ತು ಜಾಲವನ್ನು ಪತ್ತೆ ಹಚ್ಚಲಾಗಿದೆ. ಡಾರ್ಕ್‍ವೆಬ್ ಮೂಲಕ ನಡೆಸುವ ಡ್ರಗ್ಸ್ ಜಾಲವನ್ನೂ ಕೂಡ ಬೇಧಿಸಲಾಗಿದೆ ಎಂದರು. ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು ನಿಗ್ರಹಿಸಲಾಗಿದ್ದರೂ, ಕರ್ನಾಟಕದ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಈ ಸಮಸ್ಯೆಯನ್ನು ಮಟ್ಟಹಾಕಲು ಹೆಚ್ಚಿನ ಸಹಕಾರ ಅಗತ್ಯ ಎಂದರು.

ಭಯೋತ್ಪಾದನೆ ನಿಗ್ರಹ:
ಭಯೋತ್ಪದನಾ ಚಟುವಟಿಕೆಗಳು ರಾಜ್ಯದಲ್ಲಿಯೂ ನಡೆದಿದ್ದು, ಇವುಗಳ ನಿಗ್ರಹಕ್ಕೆ ಮಾಹಿತಿ ಸಂಗ್ರಹಣೆ, ಸಮನ್ವಯ, ಸಹಕಾರ ಹಾಗೂ ಭಯೋತ್ಪಾದನಾ ಸಂಘಟನೆಗಳ ವಿರುದ್ಧ ಕ್ರಮ ಅಗತ್ಯ ಎಂದರು.

ಅಂತರ ರಾಜ್ಯಗಳ ಸಮನ್ವಯ
ಅಂತರ ರಾಜ್ಯ ಅಪರಾಧಿಗಳು ಹಾಗೂ ಗ್ಯಾಂಗ್ ಗಳ ಮೇಲೆ ನಿಗಾ ಅಗತ್ಯವೆಂದ ಮುಖ್ಯಮಂತ್ರಿಗಳು ಈ ಕುರಿತು ವಿವಿಧ ರಾಜ್ಯಗಳ ನಡುವೆ ಸಮನ್ವಯ ಹಾಗೂ ಸಹಕಾರವಿದ್ದರೆ ಅಪರಾಧಿಗಳನ್ನು ಮಟ್ಟಹಾಕುವುದು ಸುಲಭ ಎಂದರು.

ತೀವ್ರಗಾಮಿಗಳ ಪ್ರತ್ಯೇಕತೆಗೆ ಕ್ರಮ
ಜೈಲುಗಳಲ್ಲಿ ತೀವ್ರಗಾಮಿಗಳ ಪ್ರತ್ಯೇಕತೆಗೆ ಕ್ರಮ ಕೈಗೊಳ್ಳುವುದು ಅವಶ್ಯಕ ಎಂದ ಮುಖ್ಯಮಂತ್ರಿಗಳು ಪೋಲಿಸ್ ಅಧಿಕಾರಿಗಳಿಗೆ ತಂತ್ರಜ್ಞಾನದ ಬಳಕೆ, ತರಬೇತಿ, ಸಾಮಥ್ರ್ಯ ವರ್ಧನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿಸಿದ್ದರಾಮಯ್ಯ
Previous Post

ಸಿಸಿಬಿ ಕಾರ್ಯಾಚರಣೆ – ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವ ಸೆರೆ

Next Post

ಕರಾವಳಿಯಲ್ಲಿ ವ್ಯಾಪಾರ ದಂಗಲ್: ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಉದ್ಘಾಟಿಸಿದ ಕಟೀಲ್

Related Posts

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ
Top Story

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

by ಪ್ರತಿಧ್ವನಿ
July 13, 2025
0

ಅನುಭಾವಿಗಳ ವಿಚಾರಧಾರೆಗಳನ್ನು ತಿಳಿಸಿಕೊಟ್ಟ ತಜ್ಞರು ದಾವಣಗೆರೆ, ಜುಲೈ 13: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ...

Read moreDetails
ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025
Next Post
Congress government : ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ರೆ ಹೋರಾಟ ಮಾಡ್ತೀವಿ ; ನಳಿನ್ ಕುಮಾರ್ ಕಟೀಲ್

ಕರಾವಳಿಯಲ್ಲಿ ವ್ಯಾಪಾರ ದಂಗಲ್: ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಉದ್ಘಾಟಿಸಿದ ಕಟೀಲ್

Please login to join discussion

Recent News

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ
Top Story

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

by ಪ್ರತಿಧ್ವನಿ
July 13, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

July 13, 2025
ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada